ರಾಯ್ಪುರ: ದುರ್ಗ್ ಜಿಲ್ಲೆಯ ಕುಮ್ಹಾರಿ ಪ್ರದೇಶದಲ್ಲಿ ಬಸ್ ಪಲ್ಟಿಯಾಗಿ ಕಂದಕಕ್ಕೆ ಉರುಳಿದ ಪರಿಣಾಮ ಕನಿಷ್ಠ 12 ಪ್ರಯಾಣಿಕರು ಸಾವನ್ನಪ್ಪಿದ್ದಾರೆ. 14 ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಮಂಗಳವಾರ ರಾತ್ರಿ 8:30 ಕ್ಕೆ ಈ ಘಟನೆ ನಡೆದಿದ್ದು, ದುರ್ಗದಲ್ಲಿ ಕಾರ್ಮಿಕರೊಂದಿಗೆ ತುಂಬಿದ್ದ ಬಸ್ ಹಳ್ಳಕ್ಕೆ ಬಿದ್ದಿದ್ದರಿಂದ 12 ಪ್ರಯಾಣಿಕರು ಸಾವನ್ನಪ್ಪಿದ್ದಾರೆ. 14 ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ ಎಂದು ದುರ್ಗದ ಜಿಲ್ಲಾಧಿಕಾರಿ ರಿಚಾ ಪ್ರಕಾಶ್ ಚೌಧರಿ ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ:ಮಧ್ಯಪ್ರದೇಶಧಲ್ಲಿ ಲೋಕಸಭಾ ಅಭ್ಯರ್ಥಿ ನಿಧನ ಹಿನ್ನೆಲೆ ಚುನಾವಣೆ ಮುಂದೂಡಿಕೆ
ಗಾಯಗೊಂಡವರಲ್ಲಿ ಹನ್ನೆರಡು ಜನರನ್ನು ಎಐಐಎಂಎಸ್ (ರಾಯಪುರ)ಗೆ ಕಳುಹಿಸಲಾಗಿದೆ. ಉಳಿದ ಇಬ್ಬರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರೆಲ್ಲರ ಸ್ಥಿತಿ ಪ್ರಸ್ತುತ ಸ್ಥಿರವಾಗಿದೆ. ನಾವು ಅವರಿಗೆ ಸಾಧ್ಯವಾದಷ್ಟು ಉತ್ತಮವಾದ ಆರೈಕೆಯನ್ನು ನೀಡುತ್ತಿದ್ದೇವೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ: ಕೇಜ್ರೀವಾಲ್ ಸಲ್ಲಿಸಿದ್ದ ಅರ್ಜಿ ವಜಾ
ಬಸ್ಸಿನೊಳಗೆ ಇನ್ನೂ ಸಿಲುಕಿರುವ ಪ್ರಯಾಣಿಕರನ್ನು ಹೊರತೆಗೆಯುವ ಪ್ರಕ್ರಿಯೆ ನಡೆಯುತ್ತಿದೆ. ಅಪಘಾತಕ್ಕೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಇದನ್ನೂ ಓದಿ: ಅಂದು “ಕೈ” ವಿಶ್ವದಿಂದ ಸಹಾಯ ಕೇಳಿತ್ತು, ಈಗ ಭಾರತ ವಿಶ್ವಕ್ಕೆ ಸಹಾಯ ಮಾಡುತ್ತಿದೆ: ಮೋದಿ

