ನವದೆಹಲಿ: ಇಡಿ ಬಂಧನ ಪ್ರಶ್ನಿಸಿ ಮುಖುಮಂತ್ರಿ ಅರವಿಂದ್ ಕೇಜ್ರಿವಾಲ್ ಸಲ್ಲಿಸಿರುವ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ವಿಚಾರಣೆ ನಡೆಸಲಿದೆ.
ಈ ಮೊದಲು ತಮ್ಮ ಬಂಧನವನ್ನು ಪ್ರಶ್ನಿಸಿ ಹೈಕೋರ್ಟ್ಗೆ ಅರವಿಂದ ಕೇಜ್ರಿವಾಲ್ ಅರ್ಜಿ ಸಲ್ಲಿಸಿದ್ದರು. ಸುದೀರ್ಘ ವಿಚಾರಣೆ ನ್ಯಾ.ಸ್ವರಣಾ ಕಾಂತ ಶರ್ಮಾ, ಇಡಿ ಬಂಧನ ಕಾನೂನು ಬದ್ದವಾಗಿದೆ ಎಂದು ಅಭಿಪ್ರಾಯಪಟ್ಟು ಅರ್ಜಿ ವಜಾ ಮಾಡಿದ್ದರು. ಇದನ್ನೂ ಓದಿ: 70ft ಆಳದ ಬಾವಿಗೆ ಬಿದ್ದ ಬಾಲಕನ ಚಲನವಲನ ಸಿಸಿಟಿವಿಯಲ್ಲಿ ಸೆರೆ
ಇದಾದ ಒಂದು ದಿನದ ನಂತರ ಕೇಜ್ರಿವಾಲ್ ಅವರು ಬುಧವಾರ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ಅಲ್ಲದೆ ತಮ್ಮ ಮೇಲ್ಮನವಿಯನ್ನು ಆದಷ್ಟು ಬೇಗ ವಿಚಾರಣೆಗೆ ಪಟ್ಟಿ ಮಾಡುವಂತೆ ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಿದ್ದರು. ಇದನ್ನೂ ಓದಿ: ರಾಮೇಶ್ವರಂ ಕೆಫೆ ಬಾಂಬ್‌ಬ್ಲಾಸ್ಟ ಪ್ರಕರಣ – ಎನ್‌ಐಡಿ ಕಸ್ಟಡಿಗೆ ಶಂಕಿತರನ್ನ ಒಪ್ಪಿಸಿದ ಕೋರ್ಟ್
ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಇಡಿ ಅಧಿಕಾರಿಗಳು ಮಾರ್ಚ್ 21 ರ ರಾತ್ರಿ ಕೇಜ್ರಿವಾಲ್ ಅವರನ್ನು ಬಂಧಿಸಿದ್ದರು. ಮಾರ್ಚ್ 22 ರಂದು ವಿಚಾರಣಾ ನ್ಯಾಯಾಲಯವು ಅವರನ್ನು ಆರು ದಿನಗಳ ಇಡಿ ಕಸ್ಟಡಿಗೆ ನೀಡಿತು. ಅದನ್ನು ಇನ್ನೂ ನಾಲ್ಕು ದಿನಗಳವರೆಗೆ ವಿಸ್ತರಿಸಲಾಯಿತು. ಏಪ್ರಿಲ್ 1 ರಂದು ಅವರನ್ನು ಏಪ್ರಿಲ್ 15 ರವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಯಿತು. ಇದನ್ನೂ ಓದಿ: ಫ್ಲೈ ಓವರ್ ಮೇಲಿಂದ ಬಿದ್ದು ಬೈಕ್ ಸವಾರ ಸಾವು