ಧಾರವಾಡ: ದಾಸನಕೊಪ್ಪ ಸರ್ಕಲ್ ಬಳಿ ಇರುವ ಅರ್ನಾ ಅಪಾರ್ಟ್ಮೆಂಟ್‌ನಲ್ಲಿರುವ ಯು.ಬಿ.ಶೆಟ್ಟಿ ಅವರ ಅಕೌಂಟೆಂಟ್ ಬಸವರಾಜ ದತ್ತುನವರ ಎಂಬವರ ಮನೆಯಲ್ಲಿ 18 ಕೋಟಿ ರೂ ಪತ್ತೆಯಾಗಿದ್ದು, ಹಣವನ್ನು ಐಟಿ (IT) ಅಧಿಕಾರಿಗಳು ಹುಬ್ಬಳ್ಳಿಯ ಕೇಶ್ವಾಪುರದಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ರವಾನಿಸಲಗಿದೆ.
ಮಂಗಳವಾರ ರಾತ್ರಿ ಚುನಾವಣಾ ವಿಚಕ್ಷಣಾ ದಳದ ಅಧಿಕಾರಿಗಳು ಬಸವರಾಜ ದತ್ತುನವರ ಅವರ ಮನೆಯಲ್ಲಿ ಮದ್ಯ ಶೇಖರಿಸಿ ಇಡಲಾಗಿದೆ ಎಂಬ ಶಂಕೆ ಮೇಲೆ ದಾಳಿ ನಡೆಸಿದ್ದರು. ದಾಳಿ ವೇಳೆ ಅವರ ಮನೆಯಲ್ಲಿ ಸುಮಾರು 18 ಕೋಟಿ ರೂಪಾಯಿ ಬೃಹತ್ ಮೊತ್ತದ ಹಣ ಪತ್ತೆಯಾಗಿದ್ದು, ಕೊಡಲೇ ಪ್ರಕರಣವನ್ನು ಆದಾಯ ತೆರಿಗೆ ಇಲಾಖೆಗೆ ಹಸ್ತಾಂತರಿಸಲಾಯಿತ್ತು. ಇದನ್ನೂ ಓದಿ: ದ್ವಾರಕೀಶ್ ಅವರ ಅಂತಿಮ ದರ್ಶನ ಪಡೆದ ಕಿಚ್ಚ ಸುದೀಪ್
ನಿನ್ನೆ 20 ಜನ ಅಧಿಕಾರಿಗಳು ದತ್ತುನವರ ಮನೆಯಲ್ಲಿ ಕಾರ್ಯಚರಣೆ ನಡೆಸಿ ಮಶಿನ್ ಮುಖಾಂತರ ಹಣವನ್ನು ಎಣಿಕೆ ಮಾಡಿದ್ದಾರೆ. ಇಂದು ಮಧ್ಯಾಹ್ನದವರೆಗೂ ಅಧಿಕಾರಿಗಳು ತಪಾಸಣೆ ನಡೆಸಿ 18 ಕೋಟಿ ರೂ. ಹಣವನ್ನು 18 ಬ್ಯಗ್‌ಗಳಲ್ಲಿ ತುಂಬಿ ಪೊಲೀಸ್ ಭದ್ರತೆ ಮದ್ಯೆ ಹುಬ್ಬಳ್ಳಿಯ ಕೇಶಾಪುರದಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಸಾಗಿಸಿದ್ದಾರೆ. ಇದನ್ನೂ ಓದಿ: ರಾಮಮಂದಿರದಲ್ಲಿ ಬಾಲರಾಮನ ಹಣೆಯ ಸ್ಪರ್ಶಿಸಿದ ಸೂರ್ಯರಶ್ಮಿ
ಬಸವರಾಜ ದತ್ತುನವರು ತಾನು ಯು.ಬಿ.ಶೇಟ್ಟಿ ಅವರ ಅಕೌಂಟೆಂಟ್ ಎಂದು ಹೇಳಿಕೊಂಡಿದ್ದರಿಂದ ಐಟಿ ಅಧಿಕಾರಿಗಳು ಶೆಟ್ಟಿ ಅವರ ಕಚೇರಿ ಮೇಲೂ ದಾಳಿ ಮಾಡಿ ಪರಿಶೀಲನೆ ನಡೆಸಿದ್ದರು. ಬುಧವಾರ ಮಧ್ಯಾಹ್ನ 2 ಗಂಟೆವರೆಗೂ ಐಟಿ ಅಧಿಕಾರಿಗಳು ಪರಿಶಿಲನೆ ನಡೆಸಿ ಎರಡು ಪೊಲಿಸ್ ಎಸ್ಕಾರ್ಟ್ ವಾಹನದ ಸಮೇತ ಭದ್ರತೆಯೊಂದಿಗೆ 18 ಕೋಟಿ ಹಣವನ್ನು 18 ಬ್ಯಾಗ್‌ಗಳಲ್ಲಿ ತುಂಬಿಕೊಂಡು ಹುಬ್ಬಳ್ಳಿಯ ಕೇಶ್ವಾಪುರದಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ರವಾನಿಸಿದ್ದಾರೆ. ಇದನ್ನೂ ಓದಿ: ಕೈ ಅಭ್ಯರ್ಥಿ ಡಿ.ಕೆ ಸುರೇಶ್ ಆಪ್ತನ ಮನೆ ಮೇಲೆ ಐಟಿ ದಾಳಿ

