ಧಾರವಾಡ: ನೇಹಾ (Neha) ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನನ್ನ ಮಗ ಮಾಡಿರುವ ತಪ್ಪಿಗೆ ಸಮಸ್ತ ಕರ್ನಾಟಕದ ಜನತೆಗೆ ಕೈಮುಗಿದು ಕ್ಷಮೆಯಾಚಿಸುತ್ತೆನೆ ಎಂದು ಹತ್ಯೆಗೈದ ಫಯಾಜ್ ತಾಯಿ (Mother) ಮುಮ್ತಾಜ್ ಕಣ್ಣೀರಿಟ್ಟಿದ್ದಾರೆ.
ಮಗನ ಕೃತ್ಯಕ್ಕೆ ಬೇಸರ ವ್ಯಕ್ತಪಡಿಸಿದ ಅವರು, ನೇಹಾಳ ತಂದೆ-ತಾಯಿ ಬಳಿ ನಾನು ಕ್ಷಮೆ ಕೇಳುತ್ತೇನೆ. ನೇಹಾ ಕುಢ ನನ್ನ ಮಗಳು ಇದ್ದಂತೆ. ನೇಹಾ ಬೇರೆಯಲ್ಲ ನನ್ನ ಮಗಳು ಬೇರೆಯಲ್ಲ. ನೇಹಾ ತಂದೆ-ತಾಯಿಗೆ ಆಗಿರುವಷ್ಟೇ ದುಖ: ಆಗಿದೆ ಎಂದು ಅಳಲು ತೊಡಿಕೊಂಡರು. ಇದನ್ನೂ ಓದಿ: ನಟ ದರ್ಶನ್ ಇಂದು ಮತ್ತಬ್ಬ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ
ನನ್ನ ಮಗ ಮಾಡಿರುವುದು ತಪ್ಪು. ಯಾವ ಮಕ್ಕಳು ಮಾಡಿದರು ತಪ್ಪು ತಪ್ಪೇ. ಈ ನೆಲದ ಕಾನೂನು ಏನು ಹೇಳುತ್ತೋ ಅದರ ಪ್ರಕಾರವೇ ಶಿಕ್ಷೆ ಆಗಲಿ ಎಂದು ಹೇಳಿದರು. ನನ್ನ ಮಗನನ್ನ ಐಎಎಸ್ ಅಧಿಕಾರಿ ಮಾಡುವ ಆಸೆ ಇತ್ತು. ತುಂಬಾ ಬುದ್ಧಿವಂತ ಇದ್ದ. ಎಲ್‌ಕೆಜಿ, ಯುಕೆಜಿ ಯಿಂದ 90% ಜಾಸ್ತಿ ಮಾರ್ಕ್ಸ್ ತೆಗೆಯುತ್ತಿದ್ದ ಎಂದು ಮಗನ ಬಗ್ಗೆ ಹೇಳಿಕೊಂಡರು. ಇದನ್ನೂ ಓದಿ: ನಾಮಪತ್ರ ಸಲ್ಲಿಸಿದ ನಟ ಬಾಲಯ್ಯ – 280.64 ಕೋಟಿ ರೂ ಆಸ್ತಿ ಘೋಷನೆ
ಅವನು ತಪ್ಪು ಮಾಡಿದ್ದಾನೆ. ಶಿಕ್ಷೆ ಆಗಲೇಬೇಕು. ನಾನು ಕೂಡ ನೂರಾರು ಮಕ್ಕಳಿಗೆ ಶಿಕ್ಷೆ ಕೊಟ್ಟಿದ್ದೇನೆ. ಈಗ ನನ್ನ ಮಗ ತಪ್ಪು ಮಾಡಿದ್ದಾನೆ ಅಂದ್ಮೇಲೆ ಶಿಕ್ಷೆ ಆಗಬೇಕು. ಶಿಕ್ಷೆಯನ್ನು ಅವನು ಅನುಭವಿಸಲಿ. ಮಗನ ತಪ್ಪಿಗೆ ನಾವು ತಲೆ ತಗ್ಗಿಸುವಂತಾಗಿದೆ ಎಂದು ಕಣ್ಣೀರಿಟ್ಟರು. ಇದನ್ನೂ ಓದಿ: ಮಧ್ಯಪ್ರದೇಶದಲ್ಲಿ ಚುನಾವಣಾ ಕರ್ತವ್ಯದಲ್ಲಿದ್ದ ಪೊಲೀಸರನ್ನು ಕರೆದೊಯ್ಯುತ್ತಿದ್ದ ಬಸ್ ಪಲ್ಟಿ

