ನವದೆಹಲಿ: ನೂರಾರು ಮಹಿಳೆಯರ ಜೀವನವನ್ನು ಹಾಳು ಮಾಡಿದ ನಾಯಕನ ಬಗ್ಗೆ ಏಕೆ ಮೌನವಾಗಿದ್ದೀರಿ ಎಂದು ಪ್ರಿಯಾಂಕಾ ಗಾಂಧಿ (Priyanka Gandhi) ಪ್ರಧಾನಿ ನರೇಂದ್ರ ಮೋದಿ (Narendra Modi) ಅವರಿಗೆ ಪ್ರಶ್ನೆ ಮಾಡಿದ್ದಾರೆ.
ಲೈಂಗಿಕ ಕಿರುಕುಳ ಆರೋಪ ಎದುರಿಸುತ್ತಿರುವ ಪ್ರಜ್ವಲ್ ರೇವಣ್ಣ (Prajwal Revanna) ಬಗ್ಗೆ ಪ್ರಿಯಾಂಕಾ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಬರೆದುಕೊಳ್ಳುವು ಮೂಲಕ ಈ ಕುರಿತು ಮೋದಿ ಅವರು ಏಕೆ ಮೌನವಾಗಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಲೈಂಗಿಕ ದೌರ್ಜನ್ಯ ಪ್ರಕರಣ: ಪ್ರಜ್ವಲ್ ರೇವಣ್ಣ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ: ಹೆಚ್‌ಡಿಕೆ
ಸಂಸದ ಪ್ರಜ್ವಲ್ ರೇವಣ್ಣ ತಂದೆ ಹಾಗೂ ಮಾಜಿ ಸಚಿವ ಹೆಚ್.ಡಿ. ರೇವಣ್ಣ ವಿರುದ್ಧವು ದೌರ್ಜನ್ಯ ಆರೋಪ ಕೇಳಿಬಂದಿದೆ. ಅವರ ಮನೆಯಲ್ಲಿ ಕೆಲಸ ಮಾಡಿಕೊಮಡಿದ್ದ ಸಂತ್ರಸ್ತೆ ದುರು ದಾಖಲಿಸಿದ್ದಾರೆ. ಹೊಳೆನರಸಿಪುರ ನಗರ ಪೊಲೀಸ್ ಠಾಣೆಯಲ್ಲಿ ಇಬ್ಬರ ವಿರುದ್ಧ ದುರು ದಾಖಲಾಗಿದೆ. ಸದ್ಯ ಪ್ರಕರಣವನ್ನು ಎಸ್‌ಐಟಿ ತನಿಖೆಗೆ ಆದೇಶಿಸಿದೆ. ಇದನ್ನೂ ಓದಿ: ಮದುವೆಗೊಪ್ಪದಕ್ಕೆ ಅತ್ಯಾಚಾರವೆಸಗಿ ಕಬ್ಬಿಣದಿಂದ ಮುಖದ ಮೇಲೆ ಹೆಸರು ಬರೆದು ಕೃತ್ಯ ಎಸಗಿದ ಪಾಗಲ್ ಪ್ರೇಮಿ

