ಬಾಗಲಕೋಟೆ: ಸಂಸದ ಪ್ರಜ್ವಲ್ ರೇವಣ್ಣ (Prajwal Revaana) ಅವರ ಪೆನ್‌ಡ್ರೈವ್ ಪ್ರಕರಣದಲ್ಲಿ ತನಿಖೆಗೆ ನಾವು ಸಂಪೂರ್ಣ ಸಹಕಾರ ಕೊಡುತ್ತೇವೆ. ಈಗ ಅವರು ಕೆಲಸ ಮಾಡಿ ತೋರಿಸಬೇಕು ಎಂದು ತಮಿಳುನಾಡು (Tamilnadu) ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ (Annamalai) ಹೇಳಿದ್ದಾರೆ.
ಜಮಖಂಡಿಯಲ್ಲಿ ಬಿಜೆಪಿ ಪರ ಚುನಾವಣಾ ಪ್ರಚಾರದ ವೇಳೆ ಅವರು ಸುದ್ದಿಗಾರರೊಂದಿಗೆ ಮಾತನಾಡಿದ್ದಾರೆ. ಈ ವೇಳೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಈಗಾಗಲೇ SIT ಏನು ಬೇಕಾದರೂ ಕ್ರಮಕೈಗೊಳ್ಳಲಿ ಎಂದಿದ್ದಾರೆ. ಬಿಜೆಪಿ ಏನಾದರು ಈ ಪ್ರಕರಣವನ್ನು ಮುಚ್ಚಿಹಾಕಲು ಮುಂದಾಗಿಯೇ? ಅಥವಾ ಪ್ರಕರಣದ ತನಿಖೆಗೆ ತಡೆಯೊಡ್ಡಲು ಯತ್ನಿಸಿಲ್ಲ. ಈ ಪ್ರಕರಣದ ಸೂಕ್ತ ತನಿಖೆ ನಡೆಸಿ ಕ್ರಮಕೈಗೊಳ್ಳಬೇಕು ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ: ಪ್ರಜ್ವಲ್ ರೇವಣ್ಣ ಕೇಸ್ ಏನಿದು ರಾಜತಾಂತ್ರಿಕ ಪಾಸ್‌ಪೋರ್ಟ್ ವಿದೇಶದಲ್ಲಿ ಬಂಧನ ಸಾಧ್ಯವೇ? ಏನು ಸವಲತ್ತು ಸಿಗುತ್ತೆ? ಎಂದು ಪ್ರಶ್ನೆ ಮಾಡಿದ್ದಾರೆ. ಇದನ್ನೂ ಓದಿ: ಪ್ರಜ್ವಲ್ ರೇವಣ್ಣ ಪೆನ್‌ಡ್ರೈವ್ ಆರೋಪ – SITಯಿಂದ ನವೀನ್ ಗೌಡಗೆ ನೋಟಿಸ್
ಪ್ರಕರಣದಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್ ಅವರ ಕೈವಾಡದ ಬಗ್ಗೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಆರೋಪದ ವಿಚಾರವಾಗಿ, ಈ ಬಗ್ಗೆ ನಾನು ಏನು ಮಾತನಾಡುವುದಿಲ್ಲ. ಈಗ ತನಿಖೆ ನಡೆಯುತ್ತಿದೆ. ತನಿಖೆಯ ಬಳಿಕ ಎಲ್ಲಾ ವಿಚಾರ ಹೊರಬರಲಿದೆ ಎಂದು ಅವರು ಹೇಳಿದ್ದಾರೆ. ಇದನ್ನೂ ಓದಿ: ಫುಡ್ ಡೆಲಿವರಿ ಬಾಯ್‌ಗೆ ಬಿಯರ್ ಬಾಟಲಿಯಿಂದ ಹಲ್ಲೆ- ಮಂಗಳಮುಖಿ ಸೇರಿ ನಾಲ್ವರ ಬಂಧನ

