ಬೆಳಗಾವಿ: ದೇವೇಗೌಡರ (Devegowda) ಕುಟುಂಬದ ಸದಸ್ಯರು ಹಾಸನವಷ್ಟೇ ಅಲ್ಲ ಕರ್ನಾಟಕದ ಹೆಸರು ಕೆಡಿಸಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ (Veerappa moily) ವಾಗ್ದಾಳಿ ನಡೆಸಿದರು.
ನಗರದಲ್ಲಿ ಮಾತನಾಡಿರುವ ಅವರು ಮಾತನಾಡಿದ ಅವರು, ದೇವಗೌಡರ ಮಗ, ಮೊಮ್ಮಗನಿಂದ ಒಂದಲ್ಲ 2 ಸಾವಿರ ಮಹಿಳೆಯರ ಮೇಲೆ ದೌರ್ಜನ್ಯವಾಗಿದೆ. ದೇವೇಗೌಡರ ಕುಟುಂಬ ಸದಸ್ಯರು ಹಾಸನವಷ್ಟೇ ಅಲ್ಲ ಕರ್ನಾಟಕದ ಹೆಸರು ಕೆಡಿಸಿದ್ದಾರೆ. ರಾಜಕೀಯ ಕೆಡಸಿದ್ದಾರೆ, ದೇಶದ ಎದುರು ಕರ್ನಾಟಕದ ತಲೆತಗ್ಗಿಸುವಂತೆ ಮಾಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ನಾರಿಶಕ್ತಿ, ಬೇಟಿ ಪಡಾವೋ, ಬೇಟಿ ಬಚಾವೋ ಅಂತಾರೆ. ಮೂರು ಲಕ್ಷ ಮಹಿಳೆಯರ ಮೇಲೆ ದೌರ್ಜನ್ಯ ಆಗ್ತಿತ್ತು. ಈಗ ಮಹಿಳೆ ಮೇಲಿನ ದೌರ್ಜನ್ಯ ಪ್ರಕರಣಗಳ ಪ್ರಮಾಣ 22 ಲಕ್ಷ ದಾಟಿದೆ ಎಂದು ಕಿಡಿಕಾರಿದರು. ಇದನ್ನೂ ಓದಿ: ಜಾತಿ ನಿಂದನೆ ಕೇಸ್‌ಗೆ ಹೆದರಿ 23 ವರ್ಷದ ಯುವಕ ಆತ್ಮಹತ್ಯೆ ಶರಣು
ಬಿಜೆಪಿ ಆಡಳಿತ ನಡೆಸುತ್ತಿರುವ ಉತ್ತರ ಪ್ರದೇಶದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ಅಧಿಕವಾಗಿವೆ. ಪ್ರಜ್ವಲ್ ಸೆಕ್ಸ್ ಸ್ಕ್ಯಾಂಡಲ್‌ನ ಎಲ್ಲ ಸೂತ್ರದಾರರು ಪ್ರಧಾನಿ ಮೋದಿ ಜೊತೆಗೆ ವೇದಿಕೆ ಹಂಚಿಕೊಳ್ತಿದ್ದಾರೆ. ಗೃಹ ಸಚಿವ ಅಮಿತ್ ಶಾ ಮಲಗಿದ್ದಾರೆಯೇ? ಇಂಥ ಕೃತ್ಯ ಎಸಗಿ, ಹಣದೋಚಿಕೊಂಡು ದೇಶದಿಂದ ಪರಾರಿ ಆಗ್ತಿದ್ದಾರೆ. ಕೇಂದ್ರದಲ್ಲಿ ಇಂಥ ಅಧಿಕಾರ ಇದ್ದರೆ ಏನು ಪ್ರಯೋಜನ ಎಂದು ಮೊಯ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಕರೆಂಟ್ ಕಂಬಕ್ಕೆ ಕ್ರೂಸರ್ ವಾಹನ ಭಯಾನಕ ಡಿಕ್ಕಿ.. 3 ಸಾವು, ಇಬ್ಬರು ಗಂಭೀರ, ಡಿಕ್ಕಿಯಾಗಲು ಕಾರಣವೇನು?

