ರಿಯೊ ಗ್ರಾಂಡೆ ಡೊ ಸುಲ್: ದಕ್ಷಿಣ ಬ್ರೇಜಿಲ್ ನಲ್ಲಿ (Brazil) ಭಾರೀ ಮಳೆಗೆ ಪ್ರವಾಹವೇ ಉಂಟಾಗಿದ್ದು, ಪ್ರವಾಹದ ತೀವ್ರತೆಗೆ ಸಾವಿನ (Death) ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ದಕ್ಷಿಣ ರಾಜ್ಯವಾದ ರಿಯೊ ಗ್ರಾಂಡೆ ಡೊ ಸುಲ್‌ನಲ್ಲಿ ಉಂಟಾದ ಪ್ರವಾಹಕ್ಕೆ ಸಿಕ್ಕಿ ಸುಮಾರು 105 ಮಂದಿ ಕಾಣೆಯಾಗಿದ್ದಾರೆ(Missing) ಎಂದು ಅಧಿಕಾರಿಗಳು ತಿಳಿಸಿದ್ದಾರೆ.
1,15,000ಕ್ಕೂ ಹೆಚ್ಚು ಜನ ಸ್ಥಳಾಂತರಗೊಂಡಿದ್ದಾರೆ. ಈ ಹಿನ್ನೆಲೆಯಲ್ಲಿ ಕುಸಿದ ಮನೆಗಳು, ಸೇತುವೆಗಳು ಮತ್ತು ರಸ್ತೆಗಳ ಅವಶೇಷಗಳ ಕೆಳಗೆ ಸಿಲುಕಿರುವವರನ್ನು ಪತ್ತೆಹಚ್ಚಲು ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿವೆ. 3,000ಕ್ಕೂ ಹೆಚ್ಚು ಸೈನಿಕರ ಸಿಬ್ಬಂದಿ ಮತ್ತು ಇತರ ರಕ್ಷಕರಿಂದ ರಕ್ಷಣಾ ಕಾರ್ಯಚರಣೆ ನಡೆಯುತ್ತಿದೆ. ನೀರು, ವಿದ್ಯುತ್ ಇಲ್ಲದೆ ಮನೆಗಳಲ್ಲಿ ಸಿಲುಕಿರುವ ಜನರ ರಕ್ಷಣೆ ಮಾಡಲಾಗುತ್ತಿದೆ. ಇದರೊಂದಿಗೆ ಸೇನಾ ಆಸ್ಪತ್ರೆ ಸ್ಥಾಪಿಸಿ ಜನರಿಗೆ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ:ಚುನಾವಣೆ ಹೊತ್ತಲ್ಲಿ ಇಡಿ ಭರ್ಜರಿ ಬೇಟೆ- ಕಾಂಗ್ರೆಸ್ ಸಚಿವನ ಆಪ್ತ ಕಾರ್ಯದರ್ಶಿ ಮನೆಯಲ್ಲಿ ಕಂತೆ ಕಂತೆ ನೋಟು ಪತ್ತೆ
ಪ್ರವಾಹದಿಂದಾಗಿ ಹಲವೆಡೆ ಭೂಕುಸಿತ ಉಂಟಾಗಿ ರಸ್ತೆಗಳು ಬಂದ್ ಆಗಿವೆ. ರಿಯೊ ಗ್ರಾಂಡೆ ಡೊ ಸುಲ್ ಹೆಚ್ಚು ಪರಿಣಾಮ ಬೀರಿದೆ. ಈ ನಡುವೆ ಡಾಟ್‌ಕಾಂ ಎಂಬ ಕಂಪನಿಯ ಕಟ್ಟಡದಲ್ಲಿ ಕೆಲವರು ಸಿಲುಕಿಕೊಂಡು ಸಮಸ್ಯೆಗೀಡಾಗಿದ್ದಾರೆ. ಕಟ್ಟಡದಲ್ಲಿರುವ ಕೆಲವರು, ಮಕ್ಕಳು ಹಸಿವಿನಿಂದ ಬಳಲುತ್ತಿದ್ದಾರೆ. ದುರಂತದ ಹವಾಮಾನ ಘಟನೆಯ ನಂತರ ಈ ಪ್ರದೇಶದಲ್ಲಿ ಗವರ್ನರ್ ಎಡ್ವರ್ಡೊ ಲೀಟ್ ತುರ್ತು ಪರಿಸ್ಥಿತಿ ಘೋಷಿಸಿದ್ದಾರೆ ಎಂದು ತಿಳಿದುಬಂದಿದೆ. ಇದನ್ನೂ ಓದಿ: ಮೇಘಾಲಯದಲ್ಲಿ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ -ಇಬ್ಬರನ್ನ ಹೊಡೆದು ಕೊಂದ ಜನ

