ಹಾಸನ: ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಅವರಿಗೆ ಸಂಬಂಧಿಸಿದ್ದು ಎನ್ನಲಾದ ಅಶ್ಲೀಲ ವೀಡಿಯೋ ಪೆನ್‌ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ತಿಕ್ (Karthik) ಹಾಗೂ ದೇವರಾಜೇಗೌಡಗೆ (Devarajegowda) ಎಸ್‌ಐಟಿ (SIT) ತಂಡ ನೋಟಿಸ್ ನೀಡಿದೆ.
ಪ್ರಜ್ವಲ್ ರೇವಣ್ಣ ಚುನಾವಣಾ ಏಜೆಂಟ್ ಪೂರ್ಣಚಂದ್ರ ತೇಜಸ್ವಿ ಅವರು ಪ್ರಕರಣ ಸಂಬಂಧ ಏ.23 ರಂದು ಹಾಸನ ಸೈಬರ್ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ಅವರು ನೀಡಿದ ದೂರನ್ನು ಆಧರಿಸಿ ಇದೀಗ ಮಾಜಿ ಕಾರು ಚಾಲಕ ಕಾರ್ತಿಕ್ ಮತ್ತು ದೇವರಾಜೇಗೌಡಗೆ ನೋಟಿಸ್ ನೀಡಲಾಗಿದೆ. ಇದನ್ನೂ ಓದಿ: ಚೂರರಲ್ಲಿ ತಪ್ಪಿದ ಭಾರಿ ಅನಾಹುತ; ಚೂರು ಯಾಮಾರಿದ್ರು ಹೋಗ್ತಿದ್ವು ನಾಲ್ಕು ಅಮಾಯಕ ಪ್ರಾಣಗಳು
ಹಾಸನ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಜ್ವಲ್ ರೇವಣ್ಣ ಮಾಜಿ ಕಾರು ಚಾಲಕ ಕಾರ್ತಿಕ್, ಪುಟ್ಟರಾಜು, ಕ್ವಾಲಿಟಿ ಬಾರ್ ಶರತ್, ನವೀನ್‌ಗೌಡ ಹಾಗೂ ಚೇತನ್‌ಗೌಡ ವಿರುದ್ಧ ಪ್ರಕರಣ ದಾಖಲಾಗಿತ್ತು. ಸೆನ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣವನ್ನು ಎಸ್‌ಐಟಿ ಕೈಗೆತ್ತಿಕೊಂಡಿದೆ.ಇದನ್ನೂ ಓದಿ: ಅಕ್ಷಯ ತೃತೀಯ ಪ್ರಯುಕ್ತ ಶ್ರೀ ಮಠದಲ್ಲಿ ಚಂದನ ಉತ್ಸವ
ಪ್ರಕರಣ ಸಂಬಂಧ ಕಾರ್ತಿಕ್ ಹಾಗೂ ದೇವರಾಜೇಗೌಡಗೆ ನೋಟಿಸ್ ನೀಡಿದೆ. ನೋಟಿಸ್ ತಲುಪಿದ 24 ಗಂಟೆಯೊಳಗೆ ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದೆ. ತನಿಖೆ ನಂತರ ಪೆನ್‌ಡ್ರೈವ್‌ನ ಸತ್ಯಾಸತ್ಯತೆ ಬಯಲಾಗುವ ಸಾಧ್ಯತೆ ಇದೆ. ಇದನ್ನೂ ಓದಿ: ಇಂದು ಅಕ್ಷಯ ತೃತೀಯ ಸಂಭ್ರಮ – ಚಿನ್ನ, ಬೆಳ್ಳಿ ಖರೀದಿಗೆ ಮುಗಿಬಿದ್ದ ಜನ

