ಬೆಂಗಳೂರು: ಪೆನ್‌ಡ್ರೈವ್ ಪ್ರಕರಣ ಎದುರಿಸುತ್ತಿರುವ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ವಿರುದ್ಧ ಮತ್ತೊಂದು ಎಫ್‌ಐಆರ್ (FIR) ಮಾಡಲು ಎಸ್‌ಐಟಿ (SIT) ಅಧಿಕಾರಿಗಳು ಸಜ್ಜಾಗಿದ್ದಾರೆ . ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಅತ್ಯಾಚಾರ ಪ್ರಕರಣ ದಾಖಲು ಮಾಡಲು ವಿಶೇಷ ತನಿಖಾ ತಂಡ SIT ಅಧಿಕಾರಿಗಳು ತಯಾರಿ ನಡೆಸುತ್ತಿದ್ದಾರೆ
ಈಗಾಗಲೇ ಪ್ರಜ್ವಲ್ ರೇವಣ್ಣ ವಿರುದ್ಧ ಎರಡು ಅತ್ಯಾಚಾರ ಪ್ರಕರಣಗಳು ದಾಖಲಾಗಿದೆ. ಆದರೆ ಇದೀಗ ಮತ್ತೆ ಸಂತ್ರಸ್ತೆಯೊಬ್ಬರ ಹೇಳಿಕೆ ಆಧಾರದ ಮೆರೆಗೆ ಎಫ್‌ಐಆರ್‌ಗೆ ಸಿದ್ದತೆ ನಡೆಸುತ್ತಿದ್ದಾರೆ. ಇದನ್ನೂ ಓದಿ: ನರೇಂದ್ರ ದಾಭೋಲ್ಕರ್ ಹತ್ಯೆ ಪ್ರಕರಣದಲ್ಲಿ ಇಬ್ಬರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ
ಸಂತ್ರಸ್ತೆಯೊಬ್ಬರ ಹೇಳಿಕೆ ಆಧರಿಸಿ ಮತ್ತೊಂದು FIR ಗೆ ಸಿದ್ಧತೆ ನಡೆಸುತ್ತಿದ್ದಾರೆ. ಅತ್ಯಾಚಾರ ಪ್ರಕರಣ ದಾಖಲು ಮಾಡಲು ವಿಶೇಷ ತನಿಖಾ ತಂಡ ಅಧಿಕಾರಿಗಳು ತಯಾರಿ ನಡೆಸುತ್ತಿದ್ದಾರೆ. ಒಂದು ಲೈಂಗಿಕ ದೌರ್ಜನ್ಯ ಪ್ರಕರಣ ದಾಖಲಾಗಿದೆ. ಇದೀಗ ಮತ್ತೊಂದು ಅತ್ಯಾಚಾರ ಪ್ರಕರಣ ದಾಖಲಿಸಲು ತಯಾರಿ ನಡೆಸುತ್ತಿದ್ದು, ಇಂದು ಸಂಜೆ ಮತ್ತೊಂದು ಎಐಆರ್ ಆಗೋ ಸಾಧ್ಯತೆ ಇದೆ. ಇದನ್ನೂ ಓದಿ: ಪ್ರಜ್ವಲ್ ನನ್ನ ಸಂಪರ್ಕಕ್ಕೆ ಬಂದಿಲ್ಲ: ನಿಖಿಲ್
ಮೇ 8 ರಂದು ಪ್ರಜ್ವಲ್ ರೇವಣ್ಣ ವಿರುದ್ಧ ಮೂರನೇ ಎಫ್‌ಐಆರ್ ದಾಖಲಿಸಲು ಮುಂದಾಗಿದ್ದಾರೆ. ಅದರಲ್ಲಿ ಒಂದಕ್ಕಿಂತ ಒಂದು ಕಠಿಣ ಸೆಕ್ಷನ್ ಗಳ ಅಡಿಯಲ್ಲಿ ದಾಖಲಿಸಲಾಗುತ್ತದೆ. ಐಪಿಸಿ ಸೆಕ್ಷನ್ 376(2)(ಎನ್) (ಮಹಿಳೆಯ ಮೇಲೆ ಪದೇ ಪದೇ ಅತ್ಯಾಚಾರ), 376(2)(ಕೆ) (ಮಹಿಳೆ ಮೇಲೆ ಪದೇ ಪದೇ ಅತ್ಯಚಾರ), 354(ಎ) (ಲೈಂಗಿಕ ಅನುಕೂಲಕ್ಕಾಗಿ ಬೇಡಿಕೆ), 354(ಬಿ) (ಬಟ್ಟೆ ಹಿಡಿದು ಎಳೆದಾಡಿದ ಆರೋಪ), 354(ಸಿ) (ಖಾಸಗಿ ಚಿತ್ರಗಳನ್ನ ಸೆರೆ ಹಿಡಿದು ವೀಕ್ಷಣೆ ಮಾಡುವುದು, ಆಕೆಯ ಒಪ್ಪಿಗೆ ಇಲ್ಲದೆ ಪ್ರಸಾರ ಮಾಡುವುದು), 506 (ಬೆದರಿಕೆ ಹಾಕುವುದು), ಹೀಗೆ ಮೂರನೇ ಎಫ್‌ಐಆರ್ ನಲ್ಲಿ ಕಠಿಣ ಸೆಕ್ಷನ್ ಗಳನ್ನ ಎಸ್‌ಐಟಿ ಹಾಕಿದೆ. ಇದನ್ನೂ ಓದಿ: ನಿನ್ನೆ ಸುರಿದ ಮಳೆಗೆ ಹಲವು ಕಡೆ ಅವಾಂತರ, ಇಂದು ಕೂಡ ರಾಜ್ಯದ ಹಲವೆಡೆ ಮಳೆ ಬರುವ ಸಾಧ್ಯತೆ
–

