ಭುವನೇಶ್ವರ್: ಕಾಂಗ್ರೆಸ್ (Congres) ನಾಯಕ ಮಣಿಶಂಕರ್ ಅಯ್ಯರ್ (Manishankar Ayier) ಅವರ ಪಾಕಿಸ್ತಾನವನ್ನು (Pakistan) ಗೌರವಿಸಿ ಎಂಬ ಹೇಳಿಕೆಗೆ ಪ್ರತಿಕ್ರಿಯಿಸಿದ ಪ್ರಧಾನಿ ನರೇಂದ್ರ ಮೋದಿ (Narendra Modi) ಆರ್ಥಿಕ ಸಮಸ್ಯೆಗಳಿಂದಾಗಿ ಭಾರತದಿಂದ ದೂರವಿರುವ ನೆರೆರಾಷ್ಟ್ರ ಪಾಕಿಸ್ತಾನ ತನ್ನ ಪರಮಾಣು ಶಸ್ತ್ರಾಸ್ತ್ರಗಳನ್ನು ಮಾರಾಟ ಮಾಡಬೇಕಾದ ಪರಿಸ್ಥಿತಿಯಲ್ಲಿದೆ ಎಂದು ಶನಿವಾರ ವ್ಯಂಗ್ಯವಾಡಿದ್ದಾರೆ.
ಒಡಿಶಾದಲ್ಲಿ ನಡೆದ ರ‍್ಯಾಲಿಯಲ್ಲಿ ಮಾತನಾಡಿದ ಪ್ರಧಾನಿ ಮೋದಿ ಅವರು ಪಾಕಿಸ್ತಾನ ಪರಮಾಣು ಬಾಂಬ್‌ಗಳನ್ನು ಹೊಂದಿದೆ ಎಂದು ಹೇಳುವ ಮೂಲಕ ಭಾರತದ ಜನರನ್ನು ಹೆದರಿಸಲು ಕಾಂಗ್ರೆಸ್ ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದ್ದಾರೆ. ಕಾಂಗ್ರೆಸ್ ಪಕ್ಷದ ಅಂತಹ ದುರ್ಬಲ ಮನೋಭಾವವು ಈ ಹಿಂದೆ ಗಡಿಯಾಚೆಗಿನ ಭಯೋತ್ಪಾದನೆಯನ್ನು ಪ್ರೋತ್ಸಾಹಿಸಿತು ಎಂದಿದ್ದಾರೆ ಮೋದಿ.ಇದನ್ನೂ ಓದಿ:SSLC ವಿದ್ಯಾರ್ಥಿ ಕೊಲೆ ಪ್ರಕರಣ; ಕೊನೆಗೂ ರುಂಡ ಪತ್ತೆ
ಕಾಂಗ್ರೆಸ್ ನಿರಂತರವಾಗಿ ತನ್ನದೇ ದೇಶವನ್ನು ಹೆದರಿಸಲು ಪ್ರಯತ್ನಿಸುತ್ತಿದೆ. ಎಚ್ಚರಿಕೆ, ಪಾಕಿಸ್ತಾನದಲ್ಲಿ ಅಣುಬಾಂಬ್ ಇದೆ ಎಂದು ಅವರು ಹೇಳುತ್ತಾರೆ. ಈ ದುರ್ಬಲರು ಭಾರತದ ಆತ್ಮವನ್ನು ಕೊಲ್ಲಲು ಪ್ರಯತ್ನಿಸುತ್ತಿದ್ದಾರೆ. ಕಾಂಗ್ರೆಸ್ ಯಾವಾಗಲೂ ಅಂತಹ ಮನೋಭಾವವನ್ನು ಹೊಂದಿತ್ತು. ಪಾಕಿಸ್ತಾನ ತಮ್ಮ ಸ್ವಂತ ಬಾಂಬ್‌ಗಳನ್ನು ಸಹ ನಿಭಾಯಿಸಲು ಸಾಧ್ಯವಾಗದ ಸ್ಥಿತಿಯಲ್ಲಿದೆ. ಅವರು ತಮ್ಮ ಬಾಂಬ್‌ಗಳನ್ನು ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದಾರೆ. ಆದರೆ ಅವರ ಕಳಪೆ ಗುಣಮಟ್ಟದ ಕಾರಣದಿಂದ ಯಾರೂ ಖರೀದಿಸಲು ಬಯಸುವುದಿಲ್ಲ. ಕಾಂಗ್ರೆಸ್ ಪಕ್ಷದ ದುರ್ಬಲ ಧೋರಣೆಯಿಂದಾಗಿ ಜಮ್ಮು ಮತ್ತು ಕಾಶ್ಮೀರದ ಜನರು ಆರು ದಶಕಗಳಿಂದ ಭಯೋತ್ಪಾದನೆಯನ್ನು ಎದುರಿಸಬೇಕಾಯಿತು ಎಂದು ಮೋದಿ ಹೇಳಿದ್ದಾರೆ. ಇದನ್ನೂ ಓದಿ: ಕ್ರಿಕೆಟ್ ಬ್ಯಾನರ್ ಕಟ್ಟುವಗ ದುರಂತ- ಓರ್ವ ಸಾವು, ಮುಗಿಲು ಮುಟ್ಟಿದ ಆಕ್ರಂದನ

