ಬೆಂಗಳೂರು: ಪೆನ್‍ಡ್ರೈವ್ (Pen Drive) ಪ್ರಕರಣ ಸದ್ದು ಮಾಡುತ್ತಿದ್ದಂತೆ ವಿದೇಶದಲ್ಲಿ ತಲೆಮರೆಸಿಕೊಂಡಿರುವ ಆರೋಪಿ ಪ್ರಜ್ವಲ್ ರೇವಣ್ಣ ಅವರನ್ನು ರ‍್ಥಿಕವಾಗಿ ಕಟ್ಟಿಹಾಕಲು ಎಸ್‍ಐಟಿ ಮುಂದಾಗಿದ್ದು, ಪ್ರಜ್ವಲ್‌ಗೆ ಸೇರಿದ ಎಲ್ಲಾ ಬ್ಯಾಂಕ್ (Bank Accounts) ಖಾತೆಗಳ ಮಾಹಿತಿ ಪಡೆಯಲಗಿದ್ದು, ಅವರ ಎಲ್ಲಾ ಬ್ಯಾಂಕ್ ಅಕೌಂಟ್‍ಗಳನ್ನು ಫ್ರೀಝ್(Friz) ಮಾಡಲು ಎಸ್ ಐಟಿ (SIT) ಅಧಿಕಾರಿಗಳು ಮುಂದಾಗಿದ್ದಾರೆ ಎನ್ನಲಾಗಿದೆ.
ಈಗಾಗಲೇ ಪ್ರಜ್ವಲ್ ಖಾತೆಗೆ ಹಣ ಸಂದಾಯ ಆಗಿರುವ ಎಲ್ಲಾ ಮಾಹಿತಿಯನ್ನು ಎಸ್‍ಐಟಿ ಕಲೆಹಾಕಿದೆ. ಎಸ್‍ಐಟಿ ಮೂಲಗಳ ಮಾಹಿತಿಯ ಪ್ರಕಾರ ಪ್ರಜ್ವಲ್ 7 ಬ್ಯಾಂಕ್ ಅಕೌಂಟ್‍ಗಳನ್ನು ಹೊಂದಿದ್ದು, ಆ ಬ್ಯಾಂಕ್‍ಗಳ ಸಂಪರ‍್ಣ ಮಾಹಿತಿಯನ್ನು ಅಧಿಕಾರಿಗಳು ಪಡೆದಿದ್ದಾರೆ. ಪ್ರಜ್ವಲ್ ತಲೆಮರೆಸಿಕೊಂಡು ತಿಂಗಳಾಗುತ್ತ ಬಂದಿದ್ದು, ಅವರು ಪತ್ತೆಯಾಗದ ಹಿನ್ನೆಲೆ ಈ ಕ್ರಮ ಕೈಗೊಳ್ಳಲು ಅಧಿಕಾರಿಗಳು ಮುಂದಾಗಿದ್ದಾರೆ. ಇದನ್ನೂ ಓದಿ: ಕಾರವಾರದಲ್ಲಿ ಅಡಿಗೆ ಮಾಡುವ ವೇಳೆ ಗ್ಯಾಸ್ ಸಿಲಿಂಡರ್ ಸ್ಫೋಟ
ಏ.21ರಂದು ಸ್ಫೋಟಗೊಂಡ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ವಿಡಿಯೋಗಳಲ್ಲಿ ಹಲವಾರು ಮಹಿಳೆಯರ ಅಶ್ಲೀಲ ವೀಡಿಯೋ ಎಲ್ಲೆಡೆ ಹರಿದಾಡುತ್ತಿವೆ. ಈ ಬಗ್ಗೆ ಈಗಾಗಲೇ ಸಂತ್ರಸ್ತೆಯರು ದೂರು ದಾಖಲಿಸಿದ್ದು, ಅವರ ಹೇಳಿಕೆಯನ್ನು ಪಡೆದುಕೊಂಡು ತನಿಖೆ ನಡೆಸಲಾಗುತ್ತಿದೆ. ಪ್ರಕರಣ ಸದ್ದು ಮಾಡುತ್ತಿದ್ದಂತೆ ವಿದೇಶಕ್ಕೆ ತೆರಳಿದ್ದ ಪ್ರಜ್ವಲ್‍ಗೆ ಈಗಾಗಲೇ ಅಧಿಕಾರಿಗಳು ಬ್ಲೂ ಕಾರ್ನಾರ್ ನೋಟಿಸ್ ಜಾರಿಗೊಳಿಸಿದ್ದಾರೆ. ಇನ್ನೂ ನ್ಯಾಯಾಲಯಕ್ಕೆ ದೋಷಾರೋಪಪಟ್ಟಿ ಸಲ್ಲಿಸಿ ರೆಡ್ ಕಾರ್ನಾರ್ ನೋಟಿಸ್ ನೀಡಲು ತಯಾರಿ ನಡೆಸಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: ಬೇಟೆಗೆ ತೆರಳಿದ್ದಾಗ ಮಿಸ್ ಫೈರ್ ಆಗಿ ಯುವಕ ದುರ್ಮರಣ
ಒಟ್ಟಾರೆ ಪೆನ್ ಡ್ರೈವ್ ಪ್ರಕರಣ ರಾಜ್ಯ ರಾಜಕಾರಣದಲ್ಲಿ ಬಿರುಗಾಳಿಯನ್ನೇ ಎಬ್ಬಿಸಿದೆ. ಪ್ರಕರಣದ ಆರೋಪಿ ಪ್ರಜ್ವಲ್ ತಲೆಮರೆಸಿಕೊಂಡಿರುವುದು ತನಿಖೆ ನಡೆಸುತ್ತಿರುವ ಎಸ್‍ಐಟಿಗೆ ಈಗ ಹೊಸ ತಲೆನೋವು ತರಿಸಿದೆ. ಇದನ್ನೂ ಓದಿ: ಹಾಸ್ಟೆಲ್‌ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಎಂಜಿನಿಯರಿಂಗ್ ವಿದ್ಯಾರ್ಥಿನಿಯ ಶವ ಪತ್ತೆ

