ಬೆಂಗಳೂರು: ರಾಜ್ಯದಲ್ಲಿ ಭಾನುವಾರ (ಮೇ 26) ಒಂದೇ ದಿನ 51 ಜನ ಅಪಘಾತಕ್ಕೆ (Road Accident) ಬಲಿಯಾಗಿದ್ದು, ಈ ಬಗ್ಗೆ ಸಂಚಾರ ಹಾಗೂ ರಸ್ತೆ ಸುರಕ್ಷತೆ (Road safety) ವಿಭಾಗದ ಎಡಿಜಿಪಿ ಅಲೋಕ್ ಕುಮಾರ್ (ADGP Alok Kumar) ಸಂಚಾರಿ ನಿಯಮ ಪಾಲಿಸುವಂತೆ (Traffic Rules) ಮನವಿ ಮಾಡಿದ್ದಾರೆ.
ಕಳೆದ 24 ಗಂಟೆಯಲ್ಲಿ ನಡೆದ ಪ್ರತ್ಯೇಕ ಅಪಘಾತಗಳಲ್ಲಿ 51 ಜನ ಸಾವಿಗೀಡಾಗಿದ್ದಾರೆ. ಸಂಚಾರಿ ನಿಯಮಗಳ ಉಲ್ಲಂಘನೆಯೇ ಅಪಘಾತಕ್ಕೆ ಕಾರಣವಾಗಿದ್ದು, ದಯವಿಟ್ಟು ಸಂಚಾರಿ ನಿಯಮ ಪಾಲಿಸಿ ಎಂದು ಸಪಘಾತದ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿ ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಬಂಗಾಳಕೊಲ್ಲಿಯಲ್ಲಿ ಇಂದು ಸಂಜೆ ಅಪ್ಪಳಿಸಲಿದೆ ರೆಮಲ್ ಚಂಡಮಾರುತ
ಇತ್ತೀಚಿನ ದಿನಗಳಲ್ಲಿ ನಡೆದ ಅಪಘಾತಗಳಲ್ಲಿ ಭಾನುವಾರ ಅತಿ ಹೆಚ್ಚು ಜನರ ಸಾವಾಗಿದೆ. ಅತಿವೇಗ ಹಾಗೂ ಅಜಾಗರೂಕತೆ ಚಾಲನೆಯಿಂದ ಅಪಘಾತಗಳು ಹೆಚ್ಚಾಗಿವೆ ಎಂದು ಅವರು ಬರೆದುಕೊಂಡಿದ್ದಾರೆ. ಇದನ್ನೂ ಓದಿ: IPL 2024: KKRಗೆ ಸೋತ ಹೈದರಾಬಾದ್, 2024 ರ ಐಪಿಲ್ ಪಟ್ಟ ಗಿಟ್ಟಿಸಿಕೊಂಡ ಕೆಕೆಆರ್
ಚಿಕ್ಕೋಡಿ, ಹಾಸನ, ಕಾರವಾರ, ರಾಮನಗರ ಸೇರಿ ರಾಜ್ಯದ ಹಲವೆಡೆ ಭಾನುವಾರ ಭಿಕರ ಅಪಘಾತಗಳು ನಡೆದಿದ್ದವು. ಬಹುತೇಕ ಅಪಘಾತಗಳಿಗೆ ಸಂಚಾರಿ ನಿಯಮಗಳ ಉಲ್ಲಂಘನೆಯೇ ಪ್ರಮುಖ ಕಾರಣ ಎನ್ನಲಾಗಿತ್ತು. ಇದನ್ನೂ ಓದಿ: 2 ವರ್ಷದ ಮಗು ಆಟವಾಡುತ್ತಾ ಸಂಪ್‍ಗೆ ಬಿದ್ದು ದುರ್ಮರಣ

