ಕೋಲ್ಕತ್ತಾ: ರೆಮಲ್ ಚಂಡಮಾರುತದಿಂದ (Remal Cyclone) ಉಂಟಾದ ಭಾರೀ ಮಳೆಗೆ ಮಿಜೋರಾಂ (Mizoram) ಸೇರಿದಂತೆ ಈಶಾನ್ಯ ರಾಜ್ಯಗಳಲ್ಲಿ ಕನಿಷ್ಠ 37 ಜನರು ಸಾವನ್ನಪ್ಪಿದ್ದಾರೆ. ಹತ್ತಾರು ಜನರು ನಾಪತ್ತೆಯಾಗಿದ್ದಾರೆ.
ಉಂಟಾದ ಮಳೆಯಿಂದ ಮನೆಗಳು ಮತ್ತು ವಿದ್ಯುತ್ ತಂತಿಗಳು ಧ್ವಂಸಗೊಂಡು ನೆಲಕ್ಕುರುಳಿವೆ. ಅಲ್ಲದೇ ನೂರಾರು ಮಂದಿ ಪರಿಹಾರ ಶಿಬಿರಗಳಲ್ಲಿ ಆಶ್ರಯ ಪಡೆಯುವಂತಾಗಿದ್ದು, ಮಿಜೋರಾಂನಲ್ಲಿ ಅತಿ ಹೆಚ್ಚಿನ ಪ್ರಮಾಣದ ಹಾನಿಯಾಗಿದೆ.
ಇವರೆಗೆ ರೆಮಲ್ ಚಂಡಮಾರುತವು ಮಿಜೋರಾಂನ ರಾಜಧಾನಿ ಐಜ್ವಾಲ್‌ನ ಮೆಲ್ತಮ್, ಹ್ಲಿಮೆನ್, ಫಾಲ್ಕಾವ್ನ್ ಮತ್ತು ಸೇಲಂ ವೆಂಗ್ ಪ್ರದೇಶಗಳಲ್ಲಿ 27 ಜನರನ್ನು ಬಲಿ ತೆಗೆದುಕೊಂಡಿದೆ ಎಂದು ರಾಜ್ಯ ಸರ್ಕಾರ ತಿಳಿಸಿದೆ. ಇದುವರೆಗೆ ಪರಿಹಾರ ತಂಡಗಳು 27 ಮಂದಿಯ ಮೃತದೇಹಗಳನ್ನು ಹೊರತೆಗೆದಿದ್ದು, ನಗರದಲ್ಲಿ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆ ಇದೆ. ಮುಖ್ಯಮಂತ್ರಿ ಲಾಲ್ದುಹೋಮ ಅವರು, ಮೃತರಿಗೆ ರಾಜ್ಯ ವಿಪತ್ತು ಪರಿಹಾರ ನಿಧಿ (ಎಸ್‌ಡಿಆರ್‌ಎಫ್) 4 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ. ಇದನ್ನೂ ಓದಿ: ಅಪ್ರಾಪ್ತೆ ಮೇಲೆ ಅತ್ಯಾಚಾರವೆಸಗಿ ಗರ್ಭಿಣಿ ಮಾಡಿದ ಮುಖ್ಯಶಿಕ್ಷಕ

ಅಸ್ಸಾಂನಲ್ಲಿ ಶಾಲಾ ಬಸ್ ಮೇಲೆ ಬಿದ್ದ ಮರ
ಚಂಡಮಾರುತದ ನಂತರ ಭಾರೀ ಮಳೆ ಮತ್ತು ಬಿರುಗಾಳಿಯಿಂದಾಗಿ ಅಸ್ಸಾಂನಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ. 18 ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ದೃಢಪಡಿಸಿದ್ದಾರೆ. ಅಸ್ಸಾಂನ ಸೋನಿತ್‌ಪುರ ಜಿಲ್ಲೆಯಲ್ಲಿ ಶಾಲಾ ಬಸ್ ಮೇಲೆ ಮರ ಬಿದ್ದು 12 ಮಕ್ಕಳು ಗಾಯಗೊಂಡಿದ್ದಾರೆ. ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ರೆಮಲ್ ಚಂಡಮಾರುತದಿಂದ ಉಂಟಾದ ಭಾರೀ ಮಳೆಯು ನಾಗಾಲ್ಯಾಂಡ್‌ನಲ್ಲಿ ನಾಲ್ಕು ಜೀವಗಳನ್ನು ಬಲಿ ತೆಗೆದುಕೊಂಡಿದೆ. 40 ಕ್ಕೂ ಹೆಚ್ಚು ಮನೆಗಳಿಗೆ ಹಾನಿಯಾಗಿದೆ ಎಂದು ರಾಜ್ಯ ಅಧಿಕಾರಿಗಳು ಖಚಿತಪಡಿಸಿದ್ದಾರೆ. ರಾಜ್ಯದ ಅತ್ಯಂತ ಹಾನಿಗೊಳಗಾದ ಪ್ರದೇಶಗಳಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಇದನ್ನೂ ಓದಿ: ಸರ್ಕಾರದಿಂದ ರಾಜ್ಯದ ಅನ್ನದಾತರಿಗೆ ಭಾರೀ ಶಾಕ್-ಸಿಡಿದ್ದೆದ ರೈತರು
ಮೇಘಾಲಯದಲ್ಲಿ ಭಾರೀ ಮಳೆ ಸುರಿದು ಇಬ್ಬರು ಸಾವನ್ನಪ್ಪಿದ್ದು, 500 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪೂರ್ವ ಜೈನ್ತಿಯಾ ಹಿಲ್ಸ್‌ನಲ್ಲಿ ಒಂದು ಸಾವು ಮತ್ತು ಪೂರ್ವ ಖಾಸಿ ಹಿಲ್ಸ್ ಜಿಲ್ಲೆಯಲ್ಲಿ ಕಾರು ಅಪಘಾತದಲ್ಲಿ ಮತ್ತೊಂದು ಸಾವು ವರದಿಯಾಗಿದೆ. ಈ ಮೂಲಕ ಈಶಾನ್ಯ ರಾಜ್ಯಗಳಲ್ಲಿ ಒಟ್ಟು ಸಾವಿನ ಸಂಖ್ಯೆ 37ಕ್ಕೆ ಏರಿದೆ.ರಿಕೆ

ತ್ರಿಪುರಾದಲ್ಲಿ ಕತ್ತಲೆಯಲ್ಲಿ ಲಕ್ಷಾಂತರ ಜನ
ತ್ರಿಪುರಾದಿಂದ ಯಾವುದೇ ಸಾವು-ನೋವುಗಳು ವರದಿಯಾಗಿಲ್ಲವಾದರೂ, ರೆಮಲ್ ಚಂಡಮಾರುತದಿಂದ ಉಂಟಾದ ಭಾರೀ ಮಳೆಯಿಂದಾಗಿ 246 ಕುಟುಂಬಗಳ ಒಟ್ಟು 746 ಜನರು ರಾಜ್ಯದ ವಿವಿಧ ಭಾಗಗಳಲ್ಲಿ ತೆರೆಯಲಾದ ಪರಿಹಾರ ಶಿಬಿರಗಳಲ್ಲಿ ಆಶ್ರಯ ಪಡೆಯುವಂತಾಗಿದೆ. ಇದನ್ನೂ ಓದಿ: ಸಂತ್ರಸ್ತೆ ಅಪಹರಣ ಪ್ರಕರಣ: ಭವಾನಿ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ನಾಳೆಗೆ ಮುಂದೂಡಿಕೆ
ಚಂಡಮಾರುತದಿಂದ ಬಾಂಗ್ಲಾದೇಶ ಮತ್ತು ಪಕ್ಕದ ಪಶ್ಚಿಮ ಬಂಗಾಳದಲ್ಲಿ ಭಾನುವಾರ ಮಧ್ಯರಾತ್ರಿಯ ಸುಮಾರಿಗೆ ಭೂಕುಸಿತ ಉಂಟಾಗಿದೆ. ಕರಾವಳಿಯಾದ್ಯಂತ ಗಾಳಿಯ ವೇಗ ಗಂಟೆಗೆ 135 ಕಿ.ಮೀ. ಇದೆ. ವಿದ್ಯುತ್ ಸ್ಥಗಿತದಿಂದಾಗಿ ಲಕ್ಷಾಂತರ ಜನ ಪರದಾಡುವಂತಾಯಿತು.

