ಹಿಮಾಚಲ ಪ್ರದೇಶದ ಮಂಡಿ ಲೋಕಸಭಾ ಕ್ಷೇತ್ರದ (Loksabha Election 2024) ಬಿಜೆಪಿ (BJP) ಅಭ್ಯರ್ಥಿಯಾಗಿ ಕಂಗನಾ ರಣಾವತ್ (Kangana Ranaut)ರಾಜಕೀಯಕ್ಕೆ ಪಾದಾರ್ಪಣೆ ಮಾಡಿದ್ದರು. ಇದೀಗ ಮೊದಲ ಸ್ಪರ್ಧೆಯಲ್ಲಿ 70000 ಮತಗಳಿಂದ ನಟಿ ಗೆದ್ದು, ಬೀಗಿದ್ದಾರೆ. ಈ ಮೂಲಕ ಅಭಿಮಾನಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.
ರಾಜಕೀಯಕ್ಕೆ ಪಾದಾರ್ಪಣೆ ಮಾಡಿದ ಕಂಗನಾ ರಣಾವತ್ (Kangana Ranaut) ಮೊದಲ ಸ್ಪರ್ಧೆಯಲ್ಲಿ ಗೆದ್ದು ಬೀಗಿದ್ದಾರೆ. 70000 ಮತಗಳಿಂದ ನಟಿ ಗೆದ್ದಿದ್ದಾರೆ. ಈ ಮೂಲಕ ನಟಿ ಫ್ಯಾನ್ಸ್‌ಗೆ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್ ಭದ್ರಕೋಟೆ ಅಮೇಥಿಯಲ್ಲಿ ಸ್ಮೃತಿ ಇರಾನಿಗೆ ಹಿನ್ನೆಡೆ
ಪ್ರತಿಸ್ಪರ್ಧಿ ಕಾಂಗ್ರೆಸ್ ಅಭ್ಯರ್ಥಿ ವಿಕ್ರಮಾದಿತ್ಯ ಸಿಂಗ್ ಮುಂದೆ ಕಂಗನಾ ಅವರು ಪಣ ತೊಟ್ಟಂತೆ ಸ್ಪರ್ಧೆ ಮಾಡಿ ಗೆದ್ದು ತೋರಿಸಿದ್ದಾರೆ. ಟಫ್ ಫೈಟ್ ಕೊಟ್ಟು ನಟಿ ಗೆದ್ದಿರೋದಕ್ಕೆ ನಟಿಯ ಅಭಿಮಾನಿಗಳು ಸಂಭ್ರಮಿಸುತ್ತಿದ್ದಾರೆ.ಇದನ್ನೂ ಓದಿ: ಸಕ್ಕರೆನಾಡು ಮಂಡ್ಯದಲ್ಲಿ ಗೆದ್ದು ಬೀಗಿದ ಹೆಚ್.ಡಿ ಕುಮಾರಸ್ವಾಮಿ
ಅಂದಹಾಗೆ, ಲೋಕಸಭಾ ಚುನಾವಣೆ ಗೆದ್ದರೆ ಬಾಲಿವುಡ್‌ಗೆ ವಿದಾಯ ಹೇಳುತ್ತೇನೆ ಎಂದು ನಟಿ ಹೇಳಿದ್ದರು. ಹಾಗಾದ್ರೆ ನಟಿ ಬಾಲಿವುಡ್‌ಗೆ ಗುಡ್ ಬೈ ಹೇಳ್ತಾರಾ ಎಂದು ನೆಟ್ಟಿಗರಲ್ಲಿ ಇದೀಗ ಚರ್ಚೆ ಶುರುವಾಗಿದೆ. ಇದನ್ನೂ ಓದಿ: ಶಾಸಕ ಪ್ರದೀಪ್ ಈಶ್ವರ್ ರಾಜೀನಾಮೆಗೆ ಒತ್ತಾಯ

