ನವದೆಹಲಿ: ಒಂದೆಡೆ ಸರ್ಕಾರ ರಚಿಸಲು ಎನ್‍ಡಿಎ (NDA) ಕಸರತ್ತು ನಡೆಸಿದರೆ, ಇತ್ತ ಕಾಂಗ್ರೆಸ್‍ನಲ್ಲಿ (Congress) ವಿಪಕ್ಷ ಸ್ಥಾನವನ್ನು ಯಾರು ಅಲಂಕರಿಸಬಹುದು ಎಂಬುದರ ಬಗ್ಗೆ ಭಾರೀ ಚರ್ಚೆಯಾಗುತ್ತಿದೆ.
ಲೋಕಸಭೆ ಚುನಾವಣೆ ಫಲಿತಾಂಶ ಹೊರಬಿದಿದ್ದು, ಕಾಂಗ್ರೆಸ್‍ನಲ್ಲಿ ವಿಪಕ್ಷ ಸ್ಥಾನ ರಾಹುಲ್ ಗಾಂಧಿಯವರಿಗೆ (Rahul Gandhi) ಬಹುತೇಕ ಫಿಕ್ಸ್ ಆಗಿದೆ. ಇದೀಗ ರಾಹುಲ್‍ಗೆ ಮತ್ತೆ ದೊಡ್ಡ ಜವಾಬ್ದಾರಿ ನೀಡಲು ಕಾಂಗ್ರೆಸ್ ನಿರ್ಧಾರ ಮಾಡಿದೆ ಎಂದು ಹೇಳಲಾಗುತ್ತಿದೆ. ಆದರೆ ಶಶಿತರೂರ್ (Shashi Taroor), ಗೌರವ್ ಗೊಗೋಯ್ (Gaurav Gogoi) ಕೂಡ ವಿರೋಧ ಪಕ್ಷದ ನಾಯಕರಾಗಲು ಆಕಾಂಕ್ಷಿಗಳಾಗಿದ್ದಾರೆ. ಇದನ್ನೂ ಓದಿ: ರಾಷ್ಟ್ರ ರಾಜಧಾನಿಗೆ ಹೆಚ್ಚುವರಿ ನೀರು ಬಿಡುವಂತೆ ಸುಪ್ರೀಂ ಸೂಚನೆ
ರಾಹುಲ್ ಗಾಂಧಿ ಅವರು ಕಾಂಗ್ರೆಸ್ 52 ಸ್ಥಾನಗಳಿಂದ ಈಗ 99 ಸ್ಥಾನಗಳಿಗೆ ಏರಿಕೆಯಾಗುವುದಕ್ಕೆ ಬಹುಮುಖ್ಯ ಪಾತ್ರ ವಹಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅವರಿಗೇ ಈ ಸ್ಥಾನವನ್ನು ನೀಡುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ. ಈ ಕುರಿತು ನಿನ್ನೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೃತೃತ್ವದಲ್ಲಿ ನಡೆದ ಇಂಡಿಯಾ ಒಕ್ಕೂಟ ಸಭೆಯಲ್ಲಿಯೂ ಚರ್ಚೆ ನಡೆಸಲಾಗಿದೆ ಎಂಬ ಮಾಹಿತಿ ಪಕ್ಷದ ಮೂಲಗಳಿಂದ ತಿಳಿದುಬಂದಿದೆ. ಇದನ್ನೂ ಓದಿ: ವಾಲ್ಮೀಕಿ ನಿಗಮ ಹಗರಣ-ಬಿಜೆಪಿಯಿಂದ ನಾಗೇಂದ್ರ ರಾಜೀನಾಮೆಗೆ ಆಗ್ರಹ

