ಇಟಾನಗರ: ಬಿಜೆಪಿ ನಾಯಕ ಪೆಮಾ ಖಂಡು (Pema Khandu) ಅವರು ಅರುಣಾಚಲ ಪ್ರದೇಶದ (Arunachal Pradesh) ಮುಖ್ಯಮಂತ್ರಿಯಾಗಿ (Chief Minister) ಸತತ ಮೂರನೇ ಅವಧಿಗೆ ಗುರುವಾರ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಇಟಾನಗರದಲ್ಲಿರುವ ಡಿಕೆ ರಾಜ್ಯ ಸಮಾವೇಶ ಕೇಂದ್ರದಲ್ಲಿ ನಡೆದ ಪ್ರಮಾಣವಚನ ಸಮಾರಂಭದಲ್ಲಿ ಕೇಂದ್ರ ಸಚಿವರಾದ ಅಮಿತ್ ಶಾ, ಜೆಪಿ ನಡ್ಡಾ, ಕಿರಣ್ ರಿಜಿಜು ಮತ್ತು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಉಪಸ್ಥಿತರಿದ್ದರು. 44 ವಯಸ್ಸಿನ ಖಂಡು 2016 ರಲ್ಲಿ ಮೊದಲ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದರು. ಇದನ್ನೂ ಓದಿ: ಬ್ರಾ ಸೈಜ್ ಮೇಲೆ ಹುಡುಗಿಯರನ್ನು ಕಾಣುತ್ತಾರೆ – ಇಲಾನ್ ಮಸ್ಕ್ ವಿರುದ್ಧ ಮಾಜಿ ಉದ್ಯೋಗಿಗಳ ಆರೋಪ

ಖಂಡು ಅವರು ಬುಧವಾರ ಅರುಣಾಚಲ ಪ್ರದೇಶದಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಆಯ್ಕೆಯಾಗಿದ್ದರು. ಸತತ ಮೂರನೇ ಅವಧಿಗೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಅರುಣಾಚಲ ಪ್ರದೇಶದ ಗವರ್ನರ್ ಲೆಫ್ಟಿನೆಂಟ್ ಜನರಲ್ ಕೆಟಿ ಪರ್ನಾಯಕ್ (ನಿವೃತ್ತ) ಖಂಡು ಅವರನ್ನು ಸರ್ಕಾರ ರಚಿಸಲು ಆಹ್ವಾನಿಸಿದ್ದರು. ಇದನ್ನೂ ಓದಿ: ಮೂರನೇ ಬಾರಿ ಪ್ರಧಾನಿಯಾದ ಬಳಿಕ ಇಟಲಿಗೆ ಮೋದಿ ಮೊದಲ ಭೇಟಿ
60 ಸದಸ್ಯ ಬಲದ ಅರುಣಾಚಲ ಪ್ರದೇಶ ವಿಧಾನಸಭೆಗೆ ಲೋಕಸಭೆ ಚುನಾವಣೆಯ ಜೊತೆಗೆ ನಡೆದ ಚುನಾವಣೆಯಲ್ಲಿ ಬಿಜೆಪಿ 46 ಸ್ಥಾನಗಳನ್ನು ಗೆದ್ದುಕೊಂಡಿತ್ತು. ಚುನಾವಣೆಗೂ ಮುನ್ನ ರಾಜ್ಯದಲ್ಲಿ ಬಿಜೆಪಿ ಹತ್ತು ಸ್ಥಾನಗಳನ್ನು ಅವಿರೋಧವಾಗಿ ಗೆದ್ದಿತ್ತು. ಇದನ್ನೂ ಓದಿ: ಪತಿಯನ್ನ ಅನ್‌ಫಾಲೋ, ಡಿಪಿ ತೆಗೆದ ವಿಜಯಲಕ್ಷ್ಮಿ- ಇಂದು ಇನ್‌ಸ್ಟಾದಿಂದಲ್ಲೇ ದೂರ

