ಕೋಲ್ಕತ್ತಾ: ಶುಕ್ರವಾರ ಕೋಲ್ಕತ್ತಾದ (Kolkatta) ಮಾಲ್‌ನಲ್ಲಿ ಭಾರೀ ಅಗ್ನಿ ಅವಘಡ (Massive Fire) ಸಂಭವಿಸಿದ್ದು ಹಲವು ಮಂದಿ ಒಳಗಡೆ ಸಿಲುಕಿದ್ದಾರೆ ಎಂದು ವರದಿಯಾಗಿದೆ.
ಕೋಲ್ಕತ್ತಾ ಆಕ್ರೊಪೊಲಿಸ್ ಮಾಲ್‌ನಲ್ಲಿ (Acropolis Mall) ಬೆಂಕಿ ಕಾಣಿಸಿಕೊಂಡಿದ್ದು, 10 ಅಗ್ನಿಶಾಮಕ ವಾಹನಗಳು ಸ್ಥಳಕ್ಕೆ ಬಂದು ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸುತ್ತಿವೆ. ಇದನ್ನೂ ಓದಿ: ಕೇಂದ್ರ ಸಚಿವರಾಗಿ ಬಂದ ಕುಮಾರಸ್ವಾಮಿಗೆ ಆಪ್ಯಲ್ ಮೂಸಂಬಿ ಹಾರ ಹಾಕಿ ಅದ್ದೂರಿ ಸ್ವಾಗತ
ಅಗ್ನಿಶಾಮಕ ಇಲಾಖೆ ಅಧಿಕಾರಿಗಳು ಮಾಲ್ ಒಳಗೆ ಇರುವ ಜನರನ್ನು ಸುರಕ್ಷಿತವಾಗಿ ಖಾಲಿ ಮಾಡಿಸುತ್ತಿದ್ದಾರೆ. ಬೆಂಕಿಗೆ ನಿಖರ ಕಾರಣ ಏನು ಎನ್ನುವುದು ತಿಳಿದು ಬಂದಿಲ್ಲ.
ಈ ವಾರ ಕೋಲ್ಕತ್ತಾದಲ್ಲಿ ಸಂಭವಿಸುತ್ತಿರುವ ಎರಡನೇ ಘಟನೆ ಇದಾಗಿದೆ. ಮಂಗಳವಾರ ಮುಂಜಾನೆ, ಕೋಲ್ಕತ್ತಾದ ಪಾರ್ಕ್ ಸ್ಟ್ರೀಟ್ ಪ್ರದೇಶದ ರೆಸ್ಟೋರೆಂಟ್‌ನಲ್ಲಿ ಭಾರಿ ಬೆಂಕಿ ಕಾಣಿಸಿಕೊಂಡಿತ್ತು. ಇದನ್ನೂ ಓದಿ: ರೇಣುಕಾ ಸ್ವಾಮಿ ಕೊಲೆ ಪ್ರಕರಣ: ಸ್ವಾಮಿ ಮನೆಯವರಿಗಾದ್ರೂ ಶವ ಸಿಕ್ಕಲಿ ಎಂದಿದ್ದ ಆರೋಪಿ ಕಾರ್ತಿಕ್!

