ಅಮರಾವತಿ: ಜನಸೇನಾ ಪಕ್ಷದ ಮುಖ್ಯಸ್ಥರಾಗಿರುವ ಪವನ್ (Pavan Kalyan) , ಚಂದ್ರಬಾಬು ನಾಯ್ಡು (Chandra babu Naidu) ಸರ್ಕಾರಕ್ಕೆ ಬೆಂಬಲ ನೀಡಿದರು. ಇದೀಗ ಅವರ ಜತೆಗೆ ಸೇರಿ ಸರ್ಕಾರ ರಚನೆ ಮಾಡಿದ್ದಾರೆ. ಅವರು ಆಂಧ್ರದ ಉಪಮುಖ್ಯಮಂತ್ರಿಯಾಗಿ (DCM) ನೇಮಕಾಗೊಂಡಿದ್ದಾರೆ.
ಗಾಗಲೇ ಸರ್ಕಾರದ ನೂತನ ಸಚಿವರಿಗೆ ಖಾತೆಯನ್ನು ಹಂಚಿಕೆ ಮಾಡಲಾಗಿದೆ, ಚಂದ್ರಬಾಬು ನಾಯ್ಡು ಸರ್ಕಾರಕ್ಕೆ ಬೆಂಬಲ ನೀಡಿದ ಜನಸೇನಾ ಪಕ್ಷದ ಮುಖ್ಯಸ್ಥ ಪವನ್ ಕಲ್ಯಾಣ್ (pawan kalyan) . ಇದರ ಜತೆಗೆ ಪಂಚಾಯತ್ ರಾಜ್, ಗ್ರಾಮೀಣಾಭಿವೃದ್ಧಿ ಮತ್ತು ಗ್ರಾಮೀಣ ನೀರು ಸರಬರಾಜು ಖಾತೆಗಳೊಂದಿಗೆ ಪರಿಸರ ಮತ್ತು ಅರಣ್ಯ, ವಿಜ್ಞಾನ ಮತ್ತು ತಂತ್ರಜ್ಞಾನದೊಂದಿಗೆ ಹೆಚ್ಚುವರಿ ಸ್ಥಾನವನ್ನು ನೀಡಲಾಗಿದೆ. ಇದನ್ನೂ ಓದಿ: ಅಭಿಮಾನಿಗಳನ್ನು ಬಳಸಿಕೊಂಡು ಕೊಲೆ ಮಾಡುವುದು ಎಷ್ಟು ಸರಿ? – ರಮ್ಯಾ
ಚಂದ್ರಬಾಬು ನಾಯ್ಡು ಸರ್ಕಾರ ಶುಕ್ರವಾರ ಖಾತೆಗಳನ್ನು ಹಂಚಿಕೆ ಮಾಡಲಾಗಿದೆ. ಇದರಲ್ಲಿ ಪವನ್ ಕಲ್ಯಾಣ್ ಕೂಡ ಒಬ್ಬರು. ಪವನ್ ಮೊದಲ ಬಾರಿಗೆ ಪಿಠಾಪುರಂದಿಂದ ವಿಧಾನಸಭೆಗೆ ಆಯ್ಕೆಯಾಗಿದ್ದಾರೆ. 2014 ಮತ್ತು 2019 ರ ನಡುವೆ ಟಿಡಿಪಿ ಸರ್ಕಾರದಲ್ಲಿ ಸಚಿವರಾಗಿದ್ದ ನಾರಾಯಣ ಗ್ರೂಪ್ ಆಫ್ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕ ಡಾ ಪಿ ನಾರಾಯಣ ಅವರಿಗೆ ಮತ್ತೆ ನಗರಾಭಿವೃದ್ಧಿ, ಪೌರಾಡಳಿತ ಖಾತೆಗಳನ್ನು ನೀಡಲಾಗಿದೆ.ಇದನ್ನೂ ಓದಿ: ಚನ್ನಪಟ್ಟಣ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ ಹೆಚ್‌ಡಿಕೆ

