ಹಾಸನ: ಕೌಟುಂಬಿಕ ಕಲಹ ಹಿನ್ನೆಲೆಯಲ್ಲಿ ಪತ್ನಿಗೆ ಗುಂಡಿಕ್ಕಿ ಕೊಂದು ಬಳಿಕ ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೇಲೂರು (Beluru) ತಾಲೂಕಿನ ದೊಡ್ಡಸಾಲಾವರ ಗ್ರಾಮದಲ್ಲಿ ಸೋಮವಾರ ನಡೆದಿದೆ.
ಪತಿ ಹರೀಶ್ (50) ಪತ್ನಿ ಜಾಜಿ (45) ಮೃತಪಟ್ಟ ದಂಪತಿ. ಪ್ರತಿದಿನ ಒಂದಲ್ಲ ಒಂದು ಕಾರಣಕ್ಕೆ ಈ ಜೋಟಿ ಜಗಳವಾಡುತ್ತಿದ್ದರು. ಆದರಂತೆಯೇ ಸೋಮವಾರ ರಾತ್ರಿಯೂ ದಂಪತಿ ನಡುವೆ ಗಲಾಟೆಯಾಗಿದೆ. ಇದನ್ನೂ ಓದಿ: ಆರ್‌ಆರ್ ನಗರದ ತೂಗುದೀಪ ನಿವಾಸಕ್ಕೂ ಸಂಚಕಾರ ಸಾಧ್ಯತೆ
ಈ ವೇಳೆ ಕಲಹ ವಿಕೋಪಕ್ಕೆ ತಿರುಗಿದೆ, ಬಳಿಕ ಹರೀಶ್ ಪತ್ನಿಗೆ ನಾಡ ಬಂದೂಕಿನಿಂದ ಗುಂಡು ಹಾರಿಸಿ ಕೊಲೆ ಮಾಡಿದ್ದಾನೆ. ನಂತರ ಹರೀಶ್ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಇದನ್ನೂ ಓದಿ: ಕಾಡಾನೆ ಬಾವಿಗೆ ಬಿದ್ದು ಸಾವು
ಅರೇಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಇದನ್ನೂ ಓದಿ: ಭವಾನಿ ರೇವಣ್ಣಗೆ ಬಿಗ್ ರಿಲೀಫ್ – ನಿರೀಕ್ಷಣಾ ಜಾಮೀನು ನೀಡಿದ ಕೋರ್ಟ್

