ಬೆಂಗಳೂರು: ನಂದಿನಿ ಹಾಲಿನ ದರ ಹೆಚ್ಚಿಸಿ ಕರ್ನಾಟಕ ಹಾಲು ಮಹಾಮಂಡಳ ಕೆಎಂಎಫ್ (KMF) ಮಹತ್ವದ ನಿರ್ಧಾರ ಪ್ರಕಟಿಸಿದ್ದು, ಹಾಲಿನ ದರದಲ್ಲಿ ಹೆಚ್ಚಳವಾಗಲಿದೆ ಎಂದು ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್ ತಿಳಿಸಿದ್ದಾರೆ.
ಕೆಎಂಎಫ್ ಮುಖ್ಯ ಕಚೇರಿಯಲ್ಲಿ ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್ ಸುದ್ದಿಗೋಷ್ಠಿ ನಡೆಸಿ ಹಾಲಿನ ದರ ಹೆಚ್ಚಳದ ಬಗ್ಗೆ ಮಾಹಿತಿ ನೀಡಿದಎರು. ಸದ್ಯ ಲೀಟರ್ ಹಾಲಿಗೆ 42 ರೂಪಾಯಿ ಇರುವ ದರವನ್ನು 2 ರೂಪಾಯಿ ಹೆಚ್ಚಳ ಮಾಡಲಾಗುವುದು. ಕೆಎಂಎಫ್ ಎಂಡಿ ಎಂಕೆ ಜಗದೀಶ್, ಆಡಳಿತ ಮಂಡಳಿ ಸದಸ್ಯರು ಸಹ ಸುದ್ದಿಗೋಷ್ಠಿಯಲ್ಲಿ ಭಾಗಿಯಾಗಿದ್ದಾರೆ. ಇದನ್ನೂ ಓದಿ: ಇಂದು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮುಂದುವರಿದ ಮಳೆ
ಒಂದು ಲೀಟರ್ ನಂದಿನಿ ಹಾಲಿನ (Nandini Milk) ಪ್ಯಾಕೆಟ್ಗೆ 50 ಎಂಎಲ್ ಹಾಲು ಹೆಚ್ಚುವರಿಯಾಗಿ ಸೇರಿಸಲಾಗುವುದರಿಂದ 42 ರೂಪಾಯಿ ಇರುವ (Nandini Milk Price) ದರವನ್ನು 2 ರೂಪಾಯಿ ಹೆಚ್ಚಳ ಮಾಡಲಾಗಿದೆ. ಅರ್ಧ ಲೀಟರ್ ಹಾಲಿನ ಪ್ಯಾಕೆಟ್ ದರ 22ರಿಂದ 24 ರೂ.ಗೆ ಏರಿಕೆಯಾಗಲಿದೆ. ನಾಳೆಯಿಂದ ಈ ದರ ನಾಳೆಯಿಂದ ಅನ್ವಯವಾಗಲಿದೆ ಎಂದು ಭೀಮಾನಾಯ್ಕ್ ತಿಳಿಸಿದರು.
ಮೊಸರು, ಇನ್ನಿತರ ಯಾವುದೇ ಹಾಲಿನ ಉತ್ಪನ್ನದ ದರದಲ್ಲಿ ಏರಿಕೆ ಮಾಡಲ್ಲ. ಕೇರಳದಲ್ಲಿ ಒಂದು ಲೀಟರ್ ಹಾಲಿನ ಬೆಲೆ 52 ರುಪಾಯಿ ಇದೆ. ಗುಜರಾತ್ನಲ್ಲಿ ಅಮುಲ್ ಒಂದು ಲೀಟರ್ಗೆ 56 ರೂ. ಮಹಾರಾಷ್ಟ್ರದಲ್ಲಿ 56 ರೂ. ದೆಹಲಿ ಮದರ್ ಡೈರಿಯ ಹಾಲಿನ ಬೆಲೆ 54 ರೂ. ಇದೆ ಎಂದು ಎಂದು ಭೀಮಾನಾಯ್ಕ್ ತಿಳಿಸಿದ್ದಾರೆ. ಇದನ್ನೂ ಓದಿ: ಮಂಡ್ಯದಲ್ಲಿ ಜೆಡಿಎಸ್ ಫ್ಲೆಕ್ಸ್‌ಗಳಲ್ಲಿ ರೇವಣ್ಣ ಔಟ್

