ಬೆಂಗಳೂರು: ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ (Udhayanidhi Stalin) ಅವರ ‘ಸನಾತನ ಧರ್ಮ ನಿರ್ಮೂಲನೆ’ ಹೇಳಿಕೆಗೆ ಸಂಬಂಧಿಸಿದ ಪ್ರಕರಣದಲ್ಲಿ ಬೆಂಗಳೂರು ನ್ಯಾಯಾಲಯ (Bengaluru Court) ಇಂದು (ಮಂಗಳವಾರ) ಜಾಮೀನು (Jail) ಮಂಜೂರು ಮಾಡಿದೆ.
ಇಂದು ಮುಂಜಾನೆ 42ನೇ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ಮುಂದೆ ನೋಟಿಸ್ ಜಾರಿ ಮಾಡಿದ ನಂತರ ಉದಯನಿಧಿ ಸ್ಟಾಲಿನ್ ಹಾಜರಾಗಿದ್ದರು. ಸನಾತನ ಧರ್ಮದ (Sanatana Dharma) ಬಗ್ಗೆ ಹೇಳಿಕೆ ನೀಡಿದ್ದಕ್ಕಾಗಿ ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ವಿರುದ್ಧ ಸಾಮಾಜಿಕ ಕಾರ್ಯಕರ್ತ ಪರಮೇಶ್ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ಮುಂದಿನ ವಿಚಾರಣೆ ಆಗಸ್ಟ್ 8ರಂದು ನಡೆಯಲಿದೆ. ಇದನ್ನೂ ಓದಿ: ಸಿಎಂ ಭೇಟಿಯಾದ ರೇಣುಕಾಸ್ವಾಮಿ ಕುಟುಂಬ- ರೇಣುಕಾಸ್ವಾಮಿ ಪತ್ನಿಗೆ ಸರ್ಕಾರಿ ಉದ್ಯೋಗ ಕೊಡಿಸುವಂತೆ ಪೋಷಕರು ಮನವಿ
ತಮಿಳುನಾಡು ಮುಖ್ಯಮಂತ್ರಿ ಮತ್ತು ಆಡಳಿತಾರೂಢ ಡಿಎಂಕೆ ಮುಖ್ಯಸ್ಥರಾಗಿರುವ ಎಂ. ಕೆ ಸ್ಟಾಲಿನ್ ಅವರ ಪುತ್ರ ಉದಯನಿಧಿ ಸ್ಟಾಲಿನ್ 2023ರ ಸೆಪ್ಟೆಂಬರ್ ತಿಂಗಳಲ್ಲಿ ನೀಡಿದ್ದ ‘ಸನಾತನ ಧರ್ಮದ ನಿರ್ಮೂಲನೆ’ ಹೇಳಿಕೆ ಭಾರೀ ಆಕ್ರೋಶವನ್ನು ಉಂಟುಮಾಡಿತ್ತು. ಈ ವಿವಾದಾತ್ಮಕ ಹೇಳಿಕೆಗಳಿಗೆ ಬಿಜೆಪಿ ಮತ್ತು ಧಾರ್ಮಿಕ ಸಂಘಟನೆಗಳು ತೀವ್ರ ತರಾಟೆಗೆ ತೆಗೆದುಕೊಂಡಿದ್ದವು. ಇದನ್ನೂ ಓದಿ: ರೇಣುಕಾಸ್ವಾಮಿ ಹತ್ಯೆ ಪ್ರಕರಣ: ಪವಿತ್ರಾ ಗೌಡ ಬಂಧನವಾದಾಗ ವಿಚಾರಣೆ ತಂಡದಲ್ಲಿದ್ದ ಮಹಿಳಾ ಪಿಎಸ್‌ಐಗೆ ನೋಟಿಸ್
ಸೆಪ್ಟೆಂಬರ್ 2023ರಲ್ಲಿ ಚೆನ್ನೈನಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡಿದ ಉದಯನಿಧಿ ಸ್ಟಾಲಿನ್, ಸನಾತನ ಧರ್ಮವು ಸಾಮಾಜಿಕ ನ್ಯಾಯ ಮತ್ತು ಸಮಾನತೆಗೆ ವಿರುದ್ಧವಾಗಿದೆ. ಮಲೇರಿಯಾ ಮತ್ತು ಡೆಂಗ್ಯೂ ರೀತಿಯಲ್ಲಿ ಸನಾತನ ಧರ್ಮವನ್ನು ಕೂಡ ‘ನಿರ್ಮೂಲನೆ’ ಮಾಡಬೇಕು ಎಂದು ಹೇಳಿದ್ದರು. ಇದನ್ನೂ ಓದಿ: ಭಾರೀ ಮಳೆಗೆ ಸೋರಿದ ರಾಮಮಂದಿರ ಗರ್ಭಗುಡಿ – ಪ್ರಧಾನ ಅರ್ಚಕ ಆರೋಪ

