ಮಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರು (Bengaluru) ಸೇರಿ ಉತ್ತಮ ಮಳೆಯಾಗುತ್ತಿದ್ದು, ಪುತ್ತೂರಿನಲ್ಲಿ ಭಾರೀ ಮಳೆಗೆ ಮನೆ ಮೇಲೆ ಧರೆ ಕುಸಿದು ಮಣ್ಣಿನಡಿ ಸಿಲುಕಿದ ಇಬ್ಬರು ಮಕ್ಕಳ ರಕ್ಷಣೆ ಮಾಡಿರುವ ಘಟನೆ ಪುತ್ತೂರಿನ(Puttur) ಬನ್ನೂರು ಸಮೀಪದ ಜೈನರಗುರಿಯಲ್ಲಿ ನಡೆದಿದೆ.
ನಸುಕಿನ ಜಾವ ನಿದ್ದೆಯಲ್ಲಿದ್ದ ಸಂದರ್ಭ ಮನೆ ಮೇಲೆ ಧರೆ ಕುಸಿತವಾಗಿದೆ. ಇಬ್ಬರು ಮಕ್ಕಳನ್ನ ಮನೆಯವರು ಪಾರು ಮಾಡಿದ್ದಾರೆ. ಮಜೀದ್ ಮತ್ತು ಇಬ್ಬರು ಮಲಗಿದ್ದ ಕೊಠಡಿ ಮೇಲೆ ಮಣ್ಣು ಬಿದಿದೆ. ಇದನ್ನೂ ಓದಿ: ಸುಳ್ಳು ಅತ್ಯಾಚಾರ ಕೇಸ್ ದಾಖಲಿಸಿದ್ದ ದೂರುದಾರೆ ಸೇರಿ 13 ಜನರಿಗೆ ಜೈಲು – ಕಾರಣವೇನು?

ತಂದೆ ಮಜೀದ್ ತಕ್ಷಣ ಎಚ್ಚೆತ್ತು ಮಣ್ಣಿನಡಿ ಇದ್ದ ಇಬ್ಬರು ಮಕ್ಕಳನ್ನ ಪಾರು ಮಾಡಿದ್ದಾರೆ. ಮನೆ ಪಕ್ಕದ ಧರೆಯೊಂದು ಸಡಿಲಗೊಂಡು ಮನೆ ಮೇಲೆ ಬಿದ್ದು ಹಾನಿಯಾಗಿದೆ.
ಘಟನಾ ಸ್ಥಳಕ್ಕೆ ನಗರಸಭಾ ಅಧಿಕಾರಿಗಳು ಭೇಟಿ, ನಗರಸಭೆ ಮತ್ತು ಸ್ಥಳೀಯರಿಂದ ಮಣ್ಣು ತೆರವು ಕಾರ್ಯಾಚರಣೆ ಮಾಡಲಾಗಿದೆ. ಇದನ್ನೂ ಓದಿ: ಸರ್ವಾಧಿಕಾರಿ ನಾಶವಾಗಲಿ ಎಂದು ಪ್ರಾರ್ಥನೆ ಮಾಡುತ್ತೇನೆ: ಅರವಿಂದ್ ಕೇಜ್ರಿವಾಲ್ ಬಂಧನಕ್ಕೆ ಪತ್ನಿ ಆಕ್ರೋಶ


