ಬೆಂಗಳೂರು: ಸಲಿಕಾನ್ ಸಿಟಿ ಬೆಂಗಳೂರು ಸೇರಿ ಮುಂಗಾರು ಚುಕುರುಗೊಂಡಿದ್ದು, ಉತ್ತಮ ಮಳೆಯಾಗುತ್ತಿದೆ. ಮಂದಿನ 2 ಗಂಟೆಗಳಲ್ಲಿ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ (Heavy Rain) ಮುನ್ಸೂಚನೆಯನ್ನು ಹವಾಮಾನ ಇಲಾಖೆ (IMD) ನೀಡಿದೆ.
ಮಿಂಚು ಬಿರುಗಾಳಿ ಸಹಿತ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಳ್ಳಾರಿ ದಾವಣಗೆರೆ ,ಚಿತ್ರದುರ್ಗ, ಹಾಸನ, ತುಮಕೂರು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.
ಗಾಳಿಯ ವೇಗವೂ ಗಂಟೆಗೆ 30 ರಿಂದ 40 ಕಿ.ಮೀ ಇರಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಇದನ್ನೂ ಓದಿ: ರಾಜ್ಯದಲ್ಲಿ ಡೆಂಗ್ಯೂಗೆ ಬಲಿಯಾದವರ ಮಾಹಿತಿ ನೀಡಲು ಸೂಚನೆ
ಇನ್ನೂ ಬೆಂಗಳೂರಿನಲ್ಲಿ ಬೆಳ್ಳಗಿಂದಲೂ ಮೋಡ ಕವಿದ ವಾತಾವರಣವಿದ್ದು, ಮಳೆಯಾಗುವ ಸಾಧ್ಯತೆ ಇದೆ.

