ಬೆಂಗಳೂರು: ವ್ಯಕ್ತಿಯೋರ್ವನನ್ನು ಬಡ್ಡಿ ಹಣಕ್ಕಾಗಿ ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಕೊಲೆ ಮಾಡಿರುವ ಘಟನೆ ನಗರದ ಕಾಕ್ಸ್‌ಟೌನ್ ದೊಡ್ಡಗುಂಟೆ (Doddagunte) ಬಳಿ ನಡೆದಿದೆ.
ಅಜಿತ್ (35) ಕೊಲೆಯಾದ ವ್ಯಕ್ತಿ. ಕೆಲಸ ಮುಗಿಸಿ ಮನೆಗೆ ಹಿಂತಿರುಗುವಾಗ ಮನೆ ಮುಂಭಾಗದಲ್ಲೇ ಕೊಲೆ ಮಾಡಲಾಗಿದೆ. ಇದನ್ನೂ ಓದಿ: ಜಮ್ಮು-ಕಾಶ್ಮೀರದಲ್ಲಿ ಕನ್ನಡಿಗ ಯೋಧ ಹುತಾತ್ಮ
ಅಜಿತ್ ವ್ಯಕ್ತಿಯೊಬ್ಬರಿಂದ ಅಧಿಕ ಬಡ್ಡಿಗೆ ಹಣ ಪಡೆದಿದ್ದರು. ಬಡ್ಡಿ ಹಣ ಮತ್ತು ಅಸಲು ಹಣ ವಾಪಸ್ ವಿಚಾರಕ್ಕೆ ಆರೋಪಿ ಮತ್ತು ಅಜಿತ್ ನಡುವೆ ಗಲಾಟೆ ಆಗುತ್ತಿತ್ತು. ಇಂದು ಅಜಿತ್ ಮನೆಗೆ ಬರೋದನ್ನೇ ಕಾದು ಮಾರಕಾಸ್ತ್ರದಿಂದ ಕೊಚ್ಚಿ ಕೊಲೆ ಮಾಡಿ ಆರೋಪಿ ಪರಾರಿಯಾಗಿದ್ದಾನೆ.
ಎಲೆಕ್ಟ್ರಾನಿಕ್ ಸಿಟಿ ಬಳಿಯ ಸಿಂಗಸಂದ್ರದಿಂದ ಬಂದು ಆರೋಪಿ ಕೃತ್ಯವೆಸಗಿದ್ದು, ಆರೋಪಿ ಪತ್ತೆಗಾಗಿ ಪುಲಿಕೇಶಿ ನಗರ ಪೊಲೀಸರು ತೀವ್ರ ಶೋಧ ನಡೆಸಿದ್ದಾರೆ. ಇದನ್ನೂ ಓದಿ: ಭರ್ಜರಿ ವರದಕ್ಷಿಣೆ ಕೊಟ್ಟರೂ ಮಗಳ ಹತ್ಯೆ -ಪೋಷಕರ ಆರೋಪ

