ಮೈಸೂರು: ಮುಖ್ಯಮಂತ್ರಿ ಖುರ್ಚಿ ಮೇಲೆ ಕಣ್ಣಿಟ್ಟವರಿಂದಲೇ ಮುಡಾ ಹಗರಣ ಬಯಲಿಗೆ ಬಂದಿದೆ ಎಂದು ಕೇಂದ್ರ ಸಚಿವ ಹೆಚ್‌ಡಿ ಕುಮಾರಸ್ವಾಮಿ (HD. Kumaraswamy) ಡಿಸಿಎಂ ಡಿಕೆ. ಶಿವಕುಮಾರ್ (DK.Shivakumar) ಬುಡಕ್ಕೆ ತಂದಿಟ್ಟದ್ದಾರೆ.
ಮೈಸೂರಿನ ಚಾಮುಂಡಿಬೆಟ್ಟದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿಡಿ ಫ್ಯಾಕ್ಟರಿ ಈಗ ಬಂದ್ ಆಗಿದೆ. ಮುಡಾ ಫ್ಯಾಕ್ಟರಿ ಶುರುವಾಗಿದೆ. ಅವರ ಪಕ್ಷದ ಅಧ್ಯಕ್ಷರೇ ಮುಡಾ ಹಗರಣ ಹೊರತಂದಿದ್ದಾರೆ. ಇಷ್ಟು ದಿನ ಹೊರಗೆ ಬಾರದ ಹಗರಣ ಈಗ ಬಂದಿದ್ದು ಯಾಕೆ ಮತ್ತು ಹೇಗೆ? ಇದರ ಹಿಂದೆ ಸಿಎಂ ಕುರ್ಚಿ ಮೇಲೆ ಟವಲ್ ಹಾಕಿರುವವರ ಪಾತ್ರ ಇದೆ ಎಂದು ಅವರು ಟೀಕೆ ಮಾಡಿದ್ದಾರೆ. ಇದನ್ನೂ ಓದಿ: ಡೇಂಜರ್ ಡೆಂಗ್ಯೂಗೆ ಹಾಸನದ ಬಾಲಕಿ ಬಲಿ- ಸಾವಿನ ಸಂಖ್ಯೆ 4 ಕ್ಕೆ ಏರಿಕೆ
ಬಿಜೆಪಿಯವರು ಹೋರಾಟ ಮಾಡುತ್ತಿದ್ದಾರೆ. ಆದರೆ ಹಗರಣ ಆಚೆ ಬರಲು ಕಾಂಗ್ರೆಸ್‌ನವರೇ ಒಳಗೆ ಕುಮ್ಮಕ್ಕು ಕೊಡುತ್ತಿದ್ದಾರೆ. ಈ ಬಗ್ಗೆ ನನಗೆ ಮಾಹಿತಿ ಇದೆ. ಸಿಎಂ ಸಿದ್ದರಾಮಯ್ಯ ಪತ್ನಿಗೆ ಆ ಜಾಗ ಹೇಗೆ ಬಂತು ಅಂತಲೂ ನನಗೆ ಗೊತ್ತಿದೆ. 62 ಕೋಟಿ ರೂ. ಪರಿಹಾರ ಕೇಳುವ ಸಿಎಂ ಸಿದ್ದರಾಮಯ್ಯ, ಭೂಮಿ ಕಳೆದುಕೊಂಡು ಬೀದಿಯಲ್ಲಿ ನಿಂತಿರುವ ರೈತರಿಗೂ ಪರಿಹಾರ ಕೊಡಿಸಲಿ ಎಂದು ಸವಾಲು ಹಾಕಿದ್ದಾರೆ. ಇದನ್ನೂ ಓದಿ: ಕರ್ನಾಟಕ ಕರವಾಳಿ ಜಿಲ್ಲೆಗಳಲ್ಲಿ ಭಾರೀ ಮಳೆ-ಜನ ಜೀವನ ಅಸ್ತವ್ಯಸ್ಥ
ಕೇಂದ್ರ ಸಚಿವರಾದ ಬಳಿಕ ಮೊಲದ ಬಾರಿ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ ಕುಮಾರಸ್ವಾಮಿ ನಾಡದೇವತೆ ತಾಯಿ ಚಾಮುಂಡೇಶ್ವರಿ ದರ್ಶನ ಪಡೆದರು. ಚಾಮುಂಡೇಶ್ವರಿಗೆ ವಿಶೇಷ ಪೂಜೆ ಸಲ್ಲಿಸಿದರು. ನಂತರ ಮಂಡ್ಯಕ್ಕೆ ತೆರಳಿ ಕಾಳಿಕಾಂಬ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿ ಜನತಾ ದರ್ಶನ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಕುಮಾರಸ್ವಾಮಿ ಗೆಲವು ಸಾಧಿಸಲಿ ಎಂದು ಬಿಲ್ವ ಪತ್ರೆ ಮರಕ್ಕೆ ಹರಕೆ ಗಂಟು ಕಟ್ಟಲಾಗಿತ್ತು. ಇದೀಗ ಅದನ್ನು ಇಂದು ಗಂಟನ್ನ ಕುಮಾರಸ್ವಾಮಿ ಸಮ್ಮುಖದಲ್ಲಿ ಬಿಜೆಪಿ ಕಾರ್ಯಕರ್ತರು ಬಿಚ್ಚಲಿದ್ದಾರೆ. ಇದನ್ನೂ ಓದಿ: ವರದಕ್ಷಿಣೆ ಕಿರುಕುಳಕ್ಕೆ ನವವಿವಾಹಿತೆ ಟೆಕ್ಕಿ ಆತ್ಮಹತ್ಯೆಗೆ ಶರಣು

