ಮುಂಬೈ: ಮುಂಬೈ ಬಿಎಂಡಬ್ಲ್ಯೂ ಹಿಟ್ ಆ್ಯಂಡ್ (BMW Hit And Run) ರನ್ ಪ್ರಕರಣದ ಪ್ರಮುಖ ಆರೋಪಿ ಮಿಹಿರ್ ಶಾನನ್ನು ಮಂಗಳವಾರ ಸಂಜೆ ಬಂಧಿಸಲಾಗಿದೆ. ಆರೋಪಿ ಮತ್ತು ಆತನ ತಾಯಿ, ಇಬ್ಬರು ಸಹೋದರಿಯರು ಸೇರಿದಂತೆ ಒಟ್ಟು 12 ಜನರನ್ನು ಕಸ್ಟಡಿಗೆ ತೆಗೆದುಕೊಳ್ಳಲಾಗಿದೆ.
ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ್ ಶಿಂಧೆ ಅವರ ಶಿವಸೇನಾ ಬಣದ ಮುಖಂಡ ರಾಜೇಶ್ ಶಾ ಅವರ ಮಗ ಕೃತ್ಯದ ಬಳಿಕ ಪರಾರಿಯಾಗಿದ್ದ.ನಂತರ ಪೊಲೀಸರು ಆರೋಪಿಗಾಗಿ ಬಲೆ ಬೀಸಿದ್ದರು. ಮೂರು ದಿನಗಳ ಬಳಿಕ ಇದೀಗ ಆರೋಪಿಯನ್ನ ಬಂಧಿಸಿದ್ದಾರೆ. ಅಲ್ಲದೇ ಆರೋಪಿ ತಪ್ಪಿಸಿಕೊಳ್ಳಲು ತಾಯಿ ಮತ್ತು ಸೋದರಿಯರು ಸಹಾಯ ಮಾಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ಶಾಲಾ ಹೆಣ್ಮಕ್ಕಳ ಬೆತ್ತಲೆ ಫೋಟೋ ಕ್ಲಿಕ್ಕಿಸಿ ಬ್ಲ್ಯಾಕ್‌ಮೇಲ್ – ವಿಕೃತ ಕಾಮಿ ಬಂಧನ
ಮುಂಬೈನಿಂದ 65 ಕಿಮೀ ದೂರದಲ್ಲಿರುವ ವಿರಾರ್‌ನಲ್ಲಿರುವ ಅಪಾರ್ಟ್‌ಮೆಂಟ್‌ನಲ್ಲಿ ಮಿಹಿರ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಆತನನ್ನು ವರ್ಲಿ ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿದೆ. ಇದನ್ನೂ ಓದಿ: ನಟ ದರ್ಶನ್ ವಿಚಾರಣಾಧೀನ ಕೈದಿ ನಂಬರ್ ಆಟೋ ವ್ಹೀಲಿಂಗ್ ಮಾಡ್ತಿದ್ದ ಡ್ರೈವರ್- ಚಾಲಕ ಬಂಧನ
ಮೂರು ದಿನಗಳ ಹಿಂದಷ್ಟೇ ಮುಂಬೈನಲ್ಲಿ ಹಿಟ್ ಹಿಟ್ ಆ್ಯಂಡ್ ರನ್ ಪ್ರಕರಣ ವರದಿಯಾಗಿತ್ತು. ಅಪಘಾತಕ್ಕೆ ಮಹಿಳೆಯೊಬ್ಬರು ಬಲಿಯಾಗಿದ್ದಾರೆ. ಆಕೆ ಪತಿ ಗಂಭೀರವಾಗಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ರಾಜಕಾರಣಿ ಪುತ್ರ ಮಿಹಿರ್ ಶಾ ಕಾರು ಹಿಟ್ ಆ್ಯಂಡ್ ರನ್ ಮಾಡಿ ಪರಾರಿಯಾಗಿತ್ತು. ಕಾರನ್ನು ಮಿಹಿರ್ ಚಲಾಯಿಸಿದ್ದ, ಈ ವೇಳೆ ಕುಡಿದಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಇದನ್ನೂ ಓದಿ: ದರ್ಶನ್ ಅರೆಸ್ಟ್ ಬಗ್ಗೆ ಮಾತನಾಡಲು ಇಚ್ಚಿಸದ ನಟ ಪ್ರಕಾಶ್ ರೈ
ಈ ಪ್ರಕರಣ ರಾಜಕೀಯ ತಿರುವು ಪಡೆದುಕೊಂಡಿದೆ. ಕಾಂಗ್ರೆಸ್ ನಾಯಕಿ ವರ್ಷಾ ಗಾಯಕ್ವಾಡ್ ಅವರು, ಇದು ಅಪಘಾತವಲ್ಲ ಕೊಲೆ ಎಂದು ಶಿಂಧೆ ಬಣದ ವಿರುದ್ಧ ಕಿಡಿಕಾರಿದ್ದಾರೆ. ಇದನ್ನೂ ಓದಿ: ಸೂರಜ್ ರೇವಣ್ಣ ಜಾಮೀನು ಅರ್ಜಿ ವಜಾ

