ಹೈದರಾಬಾದ್: ತೆಲಂಗಾಣದ (Telangana) ಮೇದಕ್ ಜಿಲ್ಲೆಯ ಸರ್ಕಾರಿ ಹಾಸ್ಟೆಲ್‌ನಲ್ಲಿ (Hostel) ಮಂಗಳವಾರ ನೀಡಿದ ಬೆಳಗಿನ ತಿಂಡಿಯಲ್ಲಿ ಹಲ್ಲಿ ಪತ್ತೆಯಾಗಿದೆ. 35 ವಿದ್ಯಾರ್ಥಿಗಳು (Students) ಅಸ್ವಸ್ಥರಾಗಿದ್ದಾರೆ. ರಾಮಯಂಪೇಟೆಯ ಟಿಜಿ ಮಾಡೆಲ್ ಸ್ಕೂಲ್‌ನ ವಿದ್ಯಾರ್ಥಿಗಳು ತಿಂಡಿ ತಿಂದ ಬಳಿಕ ಸುಮಾರು 35 ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದರೆ.
ವಾಂತಿ, ಬೇಧಿ ಮಕ್ಕಳಲ್ಲಿ ಕಾಣಿಸಿಕೊಂಡಿದ್ದು, ಕೂಡಲೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಅಡುಗೆಯವರ ನಿರ್ಲಕ್ಷ್ಯದಿಂದ ಘಟನೆ ಸಂಭವಿಸಿರಬಹುದು ಎನ್ನಲಾಗುತ್ತಿದೆ. ಸದ್ಯ ಅಡುಗೆಯವರು ಮತ್ತು ಸಹಾಯಕ ಅಡುಗೆಯವರನ್ನು ವಜಾಗೊಳಿಸಲಾಗಿದೆ.
ಹಾಸ್ಟೆಲ್‌ನ ಉಸ್ತುವಾರಿ ಮತ್ತು ವಿಶೇಷ ಅಧಿಕಾರಿಗೆ ಶೋಕಾಸ್ ನೋಟಿಸ್ ನೀಡಲಾಗಿದೆ ಎಂದು ಮೇದಕ್ ಜಿಲ್ಲಾ ಶಿಕ್ಷಣಾಧಿಕಾರಿ (ಡಿಇಒ) ತಿಳಿಸಿದ್ದಾರೆ. ಇದನ್ನೂ ಓದಿ: BMW ಹಿಟ್ ಆಂಡ್ ರನ್ ಪ್ರಕರಣ: ಶಿವಸೇನಾ ಉಪ ನಾಯಕ ಸ್ಥಾನದಿಂದ ರಾಜೇಶ್ ಶಾ ವಜಾ
ಕೂಡಲೇ ಸ್ಪಂದಿಸಿದ ಶಾಲಾ ಅಧಿಕಾರಿಗಳು ವೈದ್ಯಕೀಯ ನೆರವು ನೀಡಿ ವಿದ್ಯಾರ್ಥಿಗಳನ್ನು ಸಮೀಪದ ಆಸ್ಪತ್ರೆಗೆ ಕರೆದೊಯ್ದರು. ಪ್ರಾಥಮಿಕ ವರದಿಗಳ ಪ್ರಕಾರ ಆಹಾರವನ್ನು ತಯಾರಿಸುವ ಸಮಯದಲ್ಲಿ ಹಲ್ಲಿ ಆಕಸ್ಮಿಕವಾಗಿ ಬಿದ್ದಿರಬಹುದು ಎಂದು ಹೇಳಲಾಗುತ್ತಿದೆ. ಇದನ್ನೂ ಓದಿ: ಮಾಜಿ ಸಚಿವ ನಾಗೇಂದ್ರ ಆಪ್ತ ಹರೀಶ್ ಬಂಧನ
ಜಿಲ್ಲಾಧಿಕಾರಿ ಸೇರಿದಂತೆ ಉನ್ನತಾಧಿಕಾರಿಗಳಿಗೆ ಸಲ್ಲಿಸಿದ ವರದಿಯಲ್ಲಿ ವಿದ್ಯಾರ್ಥಿಗಳಿಗೆ ಬೆಳಗ್ಗೆ ಉಪ್ಪಿಟ್ಟು ನೀಡಲಾಗಿತ್ತು, ಅದರಲ್ಲಿ ಹಲ್ಲಿ ಇರುವುದನ್ನು ವಿದ್ಯಾರ್ಥಿಗಳು ಕಂಡಿದ್ದಾರೆ ಎನ್ನುವ ಮಾಹಿತಿ ಲಭ್ಯವಾಗಿದೆ. ಇದನ್ನೂ ಓದಿ: ಭವನಿ ರೇವಣ್ಣಗೆ ಮಹಿಳೆ ಕಿಡ್ನ್ಯಾಪ್ ಕೇಸ್‌ನಲ್ಲಿ ನೋಟಿಸ್ ನೀಡಿದ ಸುಪ್ರೀಂ ಕೋರ್ಟ್
ಘಟನೆಯ ಬಗ್ಗೆ ಸಮಗ್ರ ತನಿಖೆ ನಡೆಸಿ ಮುಂದಿನ ದಿನಗಳಲ್ಲಿ ಇಂತಹ ಘಟನೆಗಳು ನಡೆಯದಂತೆ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಶಾಲಾ ಆಡಳಿತ ಮಂಡಳಿ ಭರವಸೆ ನೀಡಿದೆ. ಅಡುಗೆ ಮನೆಯನ್ನು ಸ್ವಚ್ಛವಾಗಿ ಇಟ್ಟುಕೊಳ್ಳುವಂತೆ ಆದೇಶಿಸಲಾಗಿದೆ. ಇದನ್ನೂ ಓದಿ: ವಿಚ್ಛೇದಿತ ಮುಸ್ಲಿಂ ಮಹಿಳೆಯರು ಜೀವನಾಂಶ ಪಡೆಯಲು ಅರ್ಹರು: ಸುಪ್ರೀಂ ತೀರ್ಪು

