ಪ್ಯಾರಿಸ್ : ಒಲಿಂಪಿಕ್ನ ನಾಲ್ಕನೇ ದಿನವಾದ ಇಂದು 7 ತಿಂಗಳ ಗರ್ಭಿಣಿ ಈಜಿಪ್ಟ್ನ ಫೆನ್ಸರ್ ನಾಡಾ ಹಫೀಜ್ ವೈಯಕ್ತಿಕ ಫೆನ್ಸಿಂಗ್ ಸ್ಪರ್ಧೆಯಲ್ಲಿ ಭಾಗವಹಿಸಿ ಇತಿಹಾಸ ಸೃಷ್ಟಿ ಮಾಡಿದ್ದಾರೆ.
ನಾಡಾ ಹಫೀಜ್ ಅವರು 7 ತಿಂಗಳ ಗರ್ಭಿಣಿಯಾಗಿದ್ದರೂ ಒಲಿಂಪಿಕ್ಸ್‌ನಲ್ಲಿ ಸ್ಪರ್ಧಿಸಿ, 16ನೇ ಸುತ್ತಿನಲ್ಲಿ ಸೋಲನ್ನು ಕಂಡಿದ್ದಾರೆ. ಆದರೇ ಗರ್ಭಿಣಿಯಾಗಿದ್ದರೂ ಕೂಡ ದೇಶವನ್ನು ಪ್ರತಿನಿಧಿಸಿ ಜನರ ಹೃದಯವನ್ನು ಗೆದ್ದಿದ್ದಾರೆ.
26ನೇ ವಯಸ್ಸಿನ ನಾಡಾ ಹಫೀಜ್ ತನ್ನ ಮೂರನೇ ಒಲಿಂಪಿಕ್ಸ್‌ನಲ್ಲಿ ಮಹಿಳೆಯರ ವೈಯಕ್ತಿಕ ಸೇಬರ್ ಸ್ಪರ್ಧೆಯಲ್ಲಿ ತನ್ನ ಮೊದಲ ಪಂದ್ಯವನ್ನು ಗೆದ್ದಿದ್ದರು.
ಹಫೀಜ್ ಅವರು ಮಹಿಳೆಯರ ವೈಯಕ್ತಿಕ ಫೆನ್ಸಿಂಗ್ ಸ್ಪರ್ಧೆಯಲ್ಲಿ USAಯ ಎಲಿಜಬೆತ್ ಟಾರ್ಟಕೋವ್ಸ್ಕಿ ವಿರುದ್ಧ ತಮ್ಮ ಮೊದಲ ಪಂದ್ಯವನ್ನು 15-13 ರಲ್ಲಿ ಗೆದ್ದರು. ನಂತರ ಅವರು 16ನೇ ಸುತ್ತಿನಲ್ಲಿ ದಕ್ಷಿಣ ಕೊರಿಯಾದ ಜಿಯೋನ್ ಹಯಾಂಗ್ ಅವರನ್ನು ಎದುರಿಸಿದರು. ಆದರೆ ಅಂತಿಮವಾಗಿ ಸೋಲನ್ನು ಅನುಭವಿಸಿದರು.