ಬೆಂಗಳೂರು : ಬೆಂಗಳೂರಿನಲ್ಲಿ ಫುಡ್ ಪಾಯಿಸನ್ ಆಗಿ ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲಾದ ಘಟನೆ ಜ್ಞಾನಭಾರತಿಯ ಅಮ್ಮ ಆಶ್ರಮದ ಮುಂಭಾಗದ ಪಿಜಿಯಲ್ಲಿ ನಡೆದಿದ್ದು, ಸುಮಾರು 20ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅವಾಸ್ಥರಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಪಿಜಿಯಲ್ಲಿ ವಿದ್ಯಾರ್ಥಿಗಳು ಊಟ ಮಾಡುವಾಗ ಊಟದ ಹಾಲ್ ನಲ್ಲಿ ಪಿಜಿಯಲ್ಲಿ ಕೆಲಸ ಮಾಡ್ತಾ ಇದ್ದ ಮಂಜುನಾಥ್ ಎಂಬಾತನಿಂದ ಇಲಿ ಪಾಯಿಸನ್ ಸ್ಪ್ರೇ ಮಾಡಿದ್ದ. ಇಲಿ ಪಾಯಿಸನ್ ಸ್ಪ್ರೇ ಮಾಡಿದ್ದರಿಂದ ಊಟ ತಿಂತಾ ಇದ್ದೋರಿಗೆ ಫುಡ್ ಪಾಯಿಸನ್ ಆಗಿದೆ.
ರಾತ್ರಿ 8 ಗಂಟೆ ಸುಮಾರಿಗೆ ಘಟನೆ ನಡೆದಿದ್ದು, ತಕ್ಷಣವೇ ಹತ್ತಿರದ ಆಸ್ಪತ್ರೆಗಳಿಗೆ ವಿದ್ಯಾರ್ಥಿಗಳ ರವಾನೆ ಮಾಡಲಾಗಿದೆ. ಅಭಯ ಆಸ್ಪತ್ರೆ, ಭಾನು ಆಸ್ಪತ್ರೆಯಲ್ಲಿ ವಿದ್ಯಾರ್ಥಿಗಳಿಗೆ ಚಿಕಿತ್ಸೆ ನೀಡಲಾಗುತ್ತಿದ್ದು ಸದ್ಯ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಸ್ಥಳಕ್ಕೆ ಜ್ಞಾನಭಾರತಿ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.

