ಲಕ್ನೋ: ಚಾಲಕನ ನಿಯಂತ್ರಣ ತಪ್ಪಿ ಕಾರು (Car) ಟ್ರಕ್‌ಗೆ ಡಿಕ್ಕಿ ಹೊಡೆದ ಪರಿಣಾಮ 6 ಮಂದಿ ದಾರುಣವಾಗಿ ಸಾವನ್ನಪ್ಪಿರುವ ಘಟನೆ ಉತ್ತರ ಪ್ರದೇಶದ (Uttar Pradesh) ದೆಹಲಿ-ಲಕ್ನೋ (Delhi-Lucknow) ಹೆದ್ದಾರಿಯಲ್ಲಿ ನಡೆದಿದೆ.
ಹಾಪುರ್‌ನ ಗರ್ಹ್ ಕೊಟ್ವಾಲಿ ಪ್ರದೇಶದಲ್ಲಿರುವ ಬ್ರಜ್‌ಘಾಟ್ ಟೋಲ್ ಪ್ಲಾಜಾ ಬಳಿ ಸಂಭವಿದ್ದು, ಘಟನೆಯಲ್ಲಿ ಓರ್ವ ಗಂಭೀರವಾಗಿ ಗಾಯಗೊಂಡಿದ್ದಾರೆ. ಇದನ್ನೂ ಓದಿ: ಬುರ್ಖಾ ತೆಗೆದು ವೋಟರ್ ಐಡಿ ತೋರಿಸಲು ಹೇಳಿದ ಮಾಧವಿ ಲತಾ- ಪ್ರಕರಣ ದಾಖಲು
ಈ ಸಂಬಂಧ ಸಿಎಚ್‌ಸಿ ಗರಮುಕ್ತೇಶ್ವರ ಡಾ.ಸುಜೀತ್ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿ, ಘಟನಯಲ್ಲಿ ಸಾವನ್ನಪ್ಪಿದ 6 ಮಂದಿಯ ಮೃತ ದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಹತ್ತಿರದ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಹೇಳಿದರು. ಇದನ್ನೂ ಓದಿ: ರಾಜಧಾನಿ ಸೇರಿ ರಾಜ್ಯದಲ್ಲಿ ಮುಂದಿನ 4 ದಿನ ಮಳೆ ಮುಂದುವರೆಯುವ ಸಾಧ್ಯತೆ
ಮಧ್ಯರಾತ್ರಿ 12.30ರ ಸುಮಾರಿಗೆ ಅಪಘಾತ ಸಂಭವಿಸಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಅಭಿಷೇಕ್ ವರ್ಮಾ ತಿಳಿಸಿದ್ದಾರೆ. ಮೃತರ ಗುರುತು ಪತ್ತೆ ಮಾಡಲಾಗುತ್ತಿದೆ ಎಂದು ಅವರು ತಿಳಿಸಿದರು. ಇದನ್ನೂ ಓದಿ: ಹೆಚ್.ಡಿ ರೇವಣ್ಣಗೆ ಜಾಮೀನು- ಅಭಿಮಾನಿಗಳ ಸಂಭ್ರಮಾಚಾರಣೆ

