ಚಿಕ್ಕಬಳ್ಳಾಪುರ: ಹುಟ್ಟುಹಬ್ಬದ (Birthday) ದಿನವೇ ಅಪಘಾತಕ್ಕೆ ವಿದ್ಯಾರ್ಥಿನಿ ಬಲಿಯಾಗಿರುವ ಘಟನೆ ಚಿಕ್ಕಬಳ್ಳಾಪುರ (Chikkaballapura) ತಾಲೂಕಿನಲ್ಲಿ ನಡೆದಿದೆ.
ಕಾಲೇಜು ವಿದ್ಯಾರ್ಥಿನಿ ರಕ್ಷಿತಾ ಮೃತ ದುರ್ದೈವಿ. ಚಿಕ್ಕಬಳ್ಳಾಪುರ ತಾಲ್ಲೂಕಿನ ಹೊನ್ನೇನಹಳ್ಳಿ ಗ್ರಾಮದವಳಾದ ಈಕೆ ಬೆಂಗಳೂರಿನ ಖಾಸಗಿ ಕಾಲೇಜೊಂದರಲ್ಲಿ ಬಿ.ಕಾಂ ವ್ಯಾಸಂಗ ಮಾಡುತ್ತಿದ್ದಳು. ಇದನ್ನೂ ಓದಿ: ನಡು ರಸ್ತೆಯಲ್ಲೇ ಹೊತ್ತಿ ಉರಿದ ಬಿಎಂಟಿಸಿ ಬಸ್ – ತಪ್ಪಿದ ಭಾರೀ ಅನಾಹುತ
ಹುಟ್ಟುಹಬ್ಬದ ಹಿನ್ನೆಲೆ ಸೋಮವಾರ ರಾತ್ರಿ ಕಾರಿನಲ್ಲಿ ಮನೆಗೆ ಬರುತ್ತಿದ್ದಾಗ ಡಿವೈಡರ್‌ಗೆ ಡಿಕ್ಕಿಯಾಗಿದೆ. ಅಪಘಾತದಲ್ಲಿ ಯುವತಿ ಮೃತಪಟ್ಟಿದ್ದಾಳೆ. ಕಾರು ಚಾಲಕನಿಗೂ ಗಂಭೀರ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಚಿಕ್ಕಬಳ್ಳಾಪುರ ತಾಲೂಕಿನ ನಂದಿ ಪೋಲಿಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಫುಲ್ ಕೂಲ್ ಕೂಲಾದ ಬೆಂಗಳೂರು- ಮಳೆಯಾಗುವ ಸಾಧ್ಯತೆ

