ಕೋಲಾರ: ಇವಿಎಂ (EVM) ಮೆಷಿನ್ ಸಾಗಿಸುತ್ತಿದ್ದ ಕ್ಯಾಂಟರ್ ವಾಹನದ ಟೈರ್ ಬ್ಲಾಸ್ಟ್ ಆದ ಘಟನೆಯೊಂದು ಕೋಲಾರದಲ್ಲಿ (Kolar) ನಡೆದಿದೆ.
ಮುಳಬಾಗಿಲಿನಿಂದ (Mullabagilu) ಕೋಲಾರದ ಸ್ಟ್ರಾಂಗ್ ರೂಂಗೆ ಇವಿಎಂ ಸಾಗಿಸಲಾಗುತ್ತಿತ್ತು. ಈ ವೇಳೆ ತಾಲೂಕು ವಡಗೂರ್ (Vadaguru) ಗೇಟ್ ಬಳಿ ಟೈರ್ ಬ್ಲಾಸ್ಟ್ ಆಗಿದೆ. ಪರಿಣಾಮ ಸುಮಾರು 1 ಗಂಟೆಗಳ ಕಾಲ ವಾಹನ ರಸ್ತೆಯಲ್ಲಿಯೇ ನಿಲ್ಲುವಂತಾಗಿದೆ. ಇದನ್ನೂ ಓದಿ: ಉತ್ತರ ಪ್ರದೇಶಕ್ಕೆ ಕಳ್ಳಸಾಗಾಣಿಕೆಯಾಗುತ್ತಿದ್ದ 95 ಮಕ್ಕಳ ರಕ್ಷಣೆ

ಕ್ಯಾಂಟರ್ ಸೀಲ್ ಮಾಡಿರುವುದರಿಂದ ವಾಹನ ರಿಪೇರಿಯಾದ ನಂತರ ಸ್ಟ್ರಾಂಗ್ ರೂಂಗೆ ರವಾನೆ ಮಾಡಲಾಗಿದೆ. ವಾಹನದ ಸುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಒದಗಿಸಲಾಗಿತ್ತು. ತಹಶಿಲ್ದಾರ್ ಹಾಗೂ ಪೊಲೀಸ್ ಸಿಬ್ಬಂದಿ ಸ್ಥಳದಲ್ಲೇ ಮೊಕ್ಕಾಂ ಹೂಡಿದ್ದರು. ಇದನ್ನೂ ಓದಿ: ಪ್ರಧಾನಿ ಏ.28,29 ಕ್ಕೆ ರಾಜ್ಯಕ್ಕೆ – ಉತ್ತರ ಕರ್ನಾಟಕದಲ್ಲಿ ಮತಯಾಚನೆ

