ಬೆಂಗಳೂರು : ಡೆತ್ ನೋಟ್ನಲ್ಲಿ ತನ್ನ ಸಾವಿಗೆ ಕಾರಣ ಬರೆದಿಟ್ಟು ಮಹಿಳೆ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರಿನಲ್ಲಿ ಬೆಳಕಿಗೆ ಬಂದಿದೆ.
ಅತ್ತೆ, ಮಾವ, ಸೋದರತ್ತೆ, ಸೋದರ ಮಾವ ಸೇರಿ ಒಂಬತ್ತು ಜನರ ಹೆಸರನ್ನು ಐಶ್ವರ್ಯ ಎಂಬುವಳು ಬರೆದಿಟ್ಟಿದ್ದು, ಚಾರಿತ್ರ್ಯವಧೆ ಮಾಡಿ ಕಿರುಕುಳ ನೀಡಿದ್ದಾಗಿ ಡೆತ್ ನೋಟ್ನಲ್ಲಿ ಉಲ್ಲೇಖಿಸಿದ್ದಳು. ತಂದೆಯ ಮನೆಯಲ್ಲಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದರು.
ವರದಕ್ಷಿಣೆ ಕಿರುಕುಳ ಆರೋಪದಡಿ ಆರೋಪಿಗಳ ವಿರುದ್ಧ ಎಫ್ಐಆರ್ ದಾಖಲಿಸಲಾಗಿದ್ದು, ಒಂಬತ್ತು ಆರೋಪಿಗಳು ಹೈಕೋರ್ಟ್ನಲ್ಲಿ ಜಾಮೀನು ಪಡೆದಿದ್ದರು. ಆತ್ಮಹತ್ಯೆ ಪ್ರಕರಣದ ತನಿಖೆಗೆ ಹೈಕೋರ್ಟ್ನಲ್ಲಿ ತಡೆಯಾಜ್ಞೆ ತಂದಿದ್ದರು ಎನ್ನಲಾಗಿದೆ.