ಬೆಂಗಳೂರು: ವೆಗಾ ಸಿಟಿ ಮಾಲ್ನಿಂದ ಜಿಗಿದು ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಪ್ರತಿಷ್ಠಿತ ಮಾಲ್ಗಳಲ್ಲಿ ಒಂದಾದ ವೆಗಾ ಸಿಟಿ ಮಾಲ್(Vega City Mall)ನಲ್ಲಿ ಇಂದು ನಡೆದಿದೆ.
ಇತ್ತಿಚೆಗೆ ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗಿದ್ದು, ಇದೀಗ ಮತ್ತೊಂದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ. ಯುವಕ ಮಾಲ್‌ನ ನಾಲ್ಕನೇ ಮಹಡಿಯಿಂದ ಬಿದಿದ್ದಾನೆ. ಅತನನ್ನು ಆಸ್ಪತ್ರೆಗೆ ಸೇರಿಸಲು ಪ್ರಯತ್ನಿಸಲಾಯಿತ್ತು, ಆದರೆ ಆಷ್ಟರಲೇ ಕೊನೆಯುಸಿರೆಳೆದಿದ್ದು, ಆತನ ಗುರುತು ಪತ್ತೆಯಾಗಿಲ್ಲ. ಇದನ್ನೂ ಓದಿ: ಪ್ರಜ್ವಲ್ ರೇವಣ್ಣ ನ್ಯಾಯಾಧೀಶರ ಮುಂದೆ ಹಾಜರು
ಇದೀಗ ಘಟನಾ ಸ್ಥಳಕ್ಕೆ ಮೈಕೋಲೇಔಟ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತ ವ್ಯಕ್ತಿಯ ಗುರುತನ್ನು ಪತ್ತೆ ಹಚ್ಚುತ್ತಿದ್ದಾರೆ. ಇದನ್ನೂ ಓದಿ: ಶಾಸಕರು ಇರೋದು ಶಾಸನ ರೂಪಿಸಲು- ಹರೀಶ್ ಪೂಂಜಾಗೆ ಹೈಕೋರ್ಟ್ ನಲ್ಲಿ ಕ್ಲಾಸ್

