ಬೆಂಗಳೂರು: ಬೆಂಗಳೂರಿನಲ್ಲಿ ಮಹಿಳೆಯನ್ನು ಕೊಲೆ ಮಾಡಿ ಶವ ಮೂಟೆಕಟ್ಟಿ ಕಸದ ಲಾರಿಯಲ್ಲಿಟ್ಟು ಎಸ್ಕೇಪ್ ಆಗಿದ್ದ ಆರೋಫಿಯನ್ನು ಕೊನೆಗೂ ಪೊಲೀಸರು ಬಂಧಿಸದ್ದಾರೆ. ತಮ್ಸುದ್ದಿನ್ ಬಂಧಿತ ಆರೋಪಿಯಾಗಿದ್ದು, ಬೆಂಗಳೂರಿನ ಚನ್ನಮ್ಮನಕೆರೆ ಠಾಣಾ ವ್ಯಾಪ್ತಿಯ ಸ್ಕೇಟಿಂಗ್ ಗ್ರೌಂಡ್ ಬಳಿ ಈ ಘಟನೆ ನಡೆದಿದ್ದು, ಕೊಲೆಯಾದ ಮಹಿಳೆ ಹಾಗೂ ಆರೋಪಿ ತಮ್ಸುದ್ದಿನ್ ಲಿವಿಂಗ್ ರಿಲೇಶನ್ಸ್ ಶಿಪ್ ನಲ್ಲಿನದ್ದರು. ಇಬ್ಬರ ನಡುವೆ ನಡುವೆ ಭಿನ್ನಾಭಿಪ್ರಾಯ ಉಂಟಾಗಿ ಕೊಲೆಯಾಗಿದೆ ಎಂದು ಪ್ರಾಥಮಿಕ ತನಿಖೆ ವೇಳೆ ವಿಚಾರ ಬಹಿಂಗವಾಗಿದೆ. ಪ್ರಾಥಮಿಕ ತನಿಖೆ ವೇಳೆ, ಹುಳಿಮಾವು ಬಳಿಕ ಖಾಸಗಿ ಕಂಪನಿಯೊಂದರಲ್ಲಿ ಕೆಲಸ ಮಾಡುವಾಗ ಕೊಲೆಯಾದ ಪುಷ್ಪಾ @ ಆಶಾ ಹಾಗೂ ಆರೋಪಿ ಸಂಶುದ್ದೀನ್‌ಗೆ ಪರಿಚಯವಾಗಿತ್ತು.
ಏನಿದು ಘಟನೆ?
ಚೆನ್ನಮ್ಮನಕೆರೆ ಅಚ್ಚುಕಟ್ಟು ಪೊಲೀಸ್ ಠಾಣಾ ವಾಪ್ತಿಯಲ್ಲಿ ಮಹಿಳೆಯೊಬ್ಬರನ್ನ ಬರ್ಬರವಾಗಿ ಹತ್ಯೆ ಮಾಡಿ, ಮೃತದೇಹವನ್ನ ಮೂಟೆ ಕಟ್ಟಿ ಕಸದ (Garbage Truck) ಲಾರಿಯಲ್ಲಿಡಲಾಗಿತ್ತು. ರಾತ್ರಿ 1:40ಕ್ಕೆ ಕಸ ಹಾಕಲು ಬಂದಿದ್ದ ಸ್ಥಳೀಯ ವ್ಯಕ್ತಿ ಚೀಲ ಬಿಚ್ಚಿದಾಗ ಮೊದಲಿಗೆ ಕೂದಲು ಕಂಡಿತ್ತು. ಬಳಿಕ ಮೃತದೇಹ ಇರೋದು ಗೊತ್ತಾಗಿ ತಕ್ಷಣ ಆ ವ್ಯಕ್ತಿ ಪೊಲೀಸರಿಗೆ ಮಾಹಿತಿ ನೀಡಿದ್ದ. ಪೊಲೀಸರು ಬಂದಾಗ ಮಹಿಳೆ ಕೊಲೆ ವಿಚಾರ ಬಯಲಾಗಿತ್ತು.
ಇನ್ನು ಸ್ಥಳಕ್ಕೆ ಆಗಮಿಸಿದ ಸಿಕೆ ಅಚ್ಚುಕಟ್ಟು ಪೊಲೀಸರು ಸ್ಥಳೀಯ ನೀಡಿದ ದೂರಿನ ಆಧಾರದಲ್ಲಿ ಎಫ್‌ಐಆರ್ (FIR) ದಾಖಲಿಸಿಕೊಂಡಿದ್ದರು. ಸಿಸಿಟಿವಿ ಆಧಾರದ ಮೇಲೆ ಕೊಲೆ ಹಂತಕರಿಗಾಗಿ 2 ತಂಡಗಳ ರಚಿಸಿ ಶೋಧ ನಡೆಸುತ್ತಿದ್ದರು. ಬಳಿಕ ಮಹಿಳೆಯ ಗುರುತು ಪತ್ತೆ ಮಾಡಿದ್ದರು. ಕೊಲೆಯಾದ ಮಹಿಳೆ ಹುಳಿಮಾವು ನಿವಾಸಿ ಪುಷ್ಪಾ @ ಆಶಾ ಎಂದು ಗುರುತಿಸಲಾಗಿತ್ತು. ಅಲ್ಲದೇ, ಶವ ಸಾಗಾಟಕ್ಕೆ ದ್ವಿಚಕ್ರ ವಾಹನ ಬಳಕೆ ಮಾಡಿರೋದು ಗೊತ್ತಾಗಿತ್ತು. ಈ ಹಿನ್ನೆಲೆಯಲ್ಲಿ ಆರೋಪಿ ಪತ್ತೆಗೆ ಪೊಲೀಸರು ಬಲೆ ಬೀಸಿದ್ದರು.
ಪ್ರಕರಣ ದಾಖಲಾದ 20 ಗಂಟೆ ಒಳಗಾಗಿಯೇ ಹಂತಕನನ್ನು ಇನ್ಸ್‌ಪೆಕ್ಟರ್ ಗಿರೀಶ್ ನಾಯ್ಕ್ ನೇತೃತ್ವದ ತಂಡ ಬಂಧಿಸಿದೆ. ಸಿಸಿಟಿವಿ (CCTV) ದೃಶ್ಯಾವಳಿಗಳನ್ನು ಪರಿಶೀಲಿಸಿ ಹಂತಕನನ್ನ ಬಂಧಿಸಿದ್ದರು.

