ನವದೆಹಲಿ : ದೆಹಲಿಯ ಹಾಲಿ ಲೆಫ್ಟಿನೆಂಟ್ ಗವರ್ನರ್ ವಿ.ಕೆ ಸಕ್ಸೇನಾ ಅವರು 24 ವರ್ಷಗಳ ಹಿಂದೆ ಹೂಡಿರುವ ಮಾನನಷ್ಟ ಮೊಕದ್ದಮೆ ಸಂಬಂಧ ಹೋರಾಟಗಾರ್ತಿ ಮೇಧಾ ಪಾಟ್ಕರ್ ಅವರನ್ನು ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.ಪ್ರಕರಣ ಸಂಬಂಧ ಪ್ರೊಬೇಷನ್ ಬಾಂಡ್‌ಗಳನ್ನು ಸಲ್ಲಿಸದ ಕಾರಣ ಮೇಧಾ ಪಾಟ್ಕರ್ ವಿರುದ್ಧ ದೆಹಲಿ ನ್ಯಾಯಾಲಯ ಬುಧವಾರ ಏ.23 ರಂದು ಜಾಮೀನು ರಹಿತ ವಾರೆಂಟ್ ಹೊರಡಿಸಿತ್ತು.
2001ರಲ್ಲಿ ಪಾಟ್ಕರ್ ವಿರುದ್ಧ ಸಕ್ಸೇನಾ ಪ್ರಕರಣ ದಾಖಲಿಸಿದ್ದರು. ಆಗ ಅವರು ಅಹಮದಾಬಾದ್ ಮೂಲದ ಎನ್‌ಜಿಒ ನ್ಯಾಷನಲ್ ಕೌನ್ಸಿಲ್ ಫಾರ್ ಸಿವಿಲ್ ಲಿಬರ್ಟೀಸ್‌ನ ಮುಖ್ಯಸ್ಥರಾಗಿದ್ದರು. ನವೆಂಬರ್ 25, 2000ದಲ್ಲಿ ‘ದೇಶಭಕ್ತನ ನಿಜವಾದ ಮುಖ’ ಎಂಬ ಶೀರ್ಷಿಕೆಯಡಿಯಲ್ಲಿ ಪಾಟ್ಕರ್ ಅವರು ನೀಡಿದ್ದ ಪತ್ರಿಕಾ ಪ್ರಕಟಣೆಯ ವಿರುದ್ಧ ಮಾನಹಾನಿ ಆರೋಪ ಮಾಡಿ ಸಕ್ಸೇನಾ ಪ್ರಕರಣ ದಾಖಲಿಸಿದ್ದರು.
ಕಳೆದ ವರ್ಷ, ಮೇ 24 ರಂದು, ನ್ಯಾಯಾಲಯವು ಅವರನ್ನು ಮಾನನಷ್ಟದ ಆರೋಪದಲ್ಲಿ ತಪ್ಪಿತಸ್ಥರೆಂದು ಘೋಷಿಸಿತು. ಅವರ ಹೇಳಿಕೆಗಳಿಂದಾಗಿ ಸಕ್ಸೇನಾ ಅವರ ವೈಯಕ್ತಿಕ ಸಮಗ್ರತೆ ಮತ್ತು ಸಾರ್ವಜನಿಕ ಸೇವೆಯಲ್ಲಿ ಅವರ ಪಾತ್ರದ ಮೇಲೆ ನೇರ ದಾಳಿಯಾಗಿದೆ ಎಂದು ತೀರ್ಪು ನೀಡಲಾಗಿತ್ತು.
ಮೇಧಾ ಪಾಟ್ಕರ್ ತಮ್ಮ ವಿರುದ್ಧ ಹೊರಡಿಸಿದ ಪತ್ರಿಕಾ ಹೇಳಿಕೆಯೊಂದು ಮಾನಹಾನಿಕರವಾಗಿದೆ ಎಂದು ದೂರಿ ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ.ಕೆ.ಸಕ್ಷೇನಾ ಅವರು 2000ನೇ ಇಸವಿಯಲ್ಲಿ ಮಾನಹಾನಿ ಪ್ರಕರಣ ದಾಖಲಿಸಿದ್ದರು.

