ʻಕಾಮಿಡಿ ಕಿಲಾಡಿಗಳು ಸೀಸನ್ 3ʼ ಶೋ ಮೂಲಕ ಗುರುತಿಸಿಕೊಂಡಿದ್ದ ನಟ ಚಂದ್ರಶೇಖರ್ ಸಿದ್ದಿ ಅವರು ಆಗಸ್ಟ್ 1ರಂದು ಆತ್ಮಹತ್ಯೆಗೆ ಶರಣಾದರು. ಅವಕಾಶಗಳಿಲ್ಲದೇ ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದರು ಎನ್ನಲಾಗಿದೆ.
ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಕಟ್ಟಿಗೆ ಗ್ರಾಮ ಅರಣ್ಯದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ʻಕಾಮಿಡಿ ಕಿಲಾಡಿಗಳುʼ ಖ್ಯಾತಿಯ ನಟ ಚಂದ್ರಶೇಖರ ಸಿದ್ದಿಯವರ ಮೃತದೇಹ (ಆಗಸ್ಟ್ 1) ಪತ್ತೆಯಾಗಿದೆ. ನೀನಾಸಂನಲ್ಲಿ ನಾಟಕ ತರಬೇತಿ ಪಡೆದಿದ್ದ ಇವರು, ಹಾಸ್ಯ ಕಲಾವಿದರಾಗಿ ಗುರುತಿಸಿಕೊಂಡಿದ್ದರು. ʻಕಾಮಿಡಿ ಕಿಲಾಡಿಗಳುʼ ರಿಯಾಲಿಟಿ ಶೋ ಮೂಲಕ ಜನಪ್ರಿಯರಾಗಿದ್ದ ಚಂದ್ರಶೇಖರ ಸಿದ್ದಿ ಪ್ರೇಕ್ಷಕರ ಮನಸ್ಸನ್ನು ಗೆದ್ದಿದ್ದರು.
ಇನ್ನು ಇವರಿಗೆ ಅವಕಾಶಗಳು ಹೆಚ್ಚು ಸಿಗದೇ ಕೂಲಿ ಕೆಲಸ ಮಾಡಿಕೊಂಡಿದ್ದರು ಎನ್ನಲಾಗಿದೆ. ಇವರು ಸಾಕಷ್ಟು ಅಭಿಮಾನಿಗಳನ್ನ ಸಹ ಹೊಂದಿದ್ದರು. ಪತ್ನಿ ಜೊತೆ ಮನೆಯೊಂದಕ್ಕೆ ಕೆಲಸಕ್ಕಾಗಿ ತೆರಳಿದಾಗ ಅರಣ್ಯಕ್ಕೆ ಹೋಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಊರಲ್ಲಿ ನಾಟಕ ಗಳಲ್ಲಿ ನಟಿಸಿ ಹೆಸರು ಮಾಡಿದ್ದರು.
- ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿ : ಸರ್ವಪಕ್ಷ ಸಭೆ ಕರೆದ ಮೋದಿ ಸರ್ಕಾರ
- ಬೀದರ್: ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
- ದೆಹಲಿ ವಿಧಾನಸಭೆ ಸಂಕೀರ್ಣ ಸ್ಫೋಟಿಸುವುದಾಗಿ ಬೆದರಿಕೆ ಇಮೇಲ್
- ಹಿಂದೂ, ಬೌದ್ಧ, ಸಿಖ್ ಬಿಟ್ಟು ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಪರಿಶಿಷ್ಟ ಜಾತಿ ಸ್ಥಾನಮಾನ ರದ್ದು : ಸುಪ್ರೀಂ
- ಐಪಿಎಲ್-2026 ಪಂದ್ಯಗಳಿಗೆ ವಿಶೇಷ ಮಾರ್ಗಸೂಚಿ ಪ್ರಕಟಿಸಿದ ಪೊಲೀಸ್ ಇಲಾಖೆ

