ಮೈಸೂರು : ನಟ ದರ್ಶನ್ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿ ದೇವಿಯ ದರ್ಶನ ಪಡೆದಿದರು. ಈ ವೇಳೆ ದರ್ಶನ್‌ಗೆ ಪತ್ನಿ ವಿಜಯಲಕ್ಷ್ಮಿ ಹಾಗೂ ಸಹೋದರ ದಿನಕರ್ ಸಾಥ್ ನೀಡಿದ್ದಾರೆ.ಆಷಾಢ ಮಾಸದ ಎರಡನೇ ಶುಕ್ರವಾರದ ಹಿನ್ನೆಲೆಯಲ್ಲಿ ಇಂದು ಚಾಮುಂಡಿ ಬೆಟ್ಟಕ್ಕೆ ದರ್ಶನ್ ಭೆಟಿ ನೀಡಿದ್ದರು. ದೇವಸ್ಥಾನಕ್ಕೆ ತೋತಾಪುರಿ ಮೇಕೆಜೋಳ ಹಾಗೂ ಕಮಲದ ಹೂವಿನ ಅಲಂಕಾರ ಮಾಡಲಾಗಿದೆ. ದೇವಾಲಯಕ್ಕೆ ಅಪಾರ ಸಂಖ್ಯೆಯ ಭಕ್ತರು ಬಂದಿದ್ದಾರೆ.
ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಕೇಸ್‌ನಲ್ಲಿ ಜಾಮೀನಿನ ಮೇಲಿರುವ ದರ್ಶನ್‌ಗೆ, ಇತ್ತೀಚೆಗೆ ಸಿನಿಮಾ ಶೂಟಿಂಗ್‌ಗಾಗಿ ವಿದೇಶಕ್ಕೆ ತೆರಳಲು 57ನೇ ಸಿಸಿಹೆಚ್ ಕೋರ್ಟ್ ಅನುಮತಿ ನೀಡಿತ್ತು. ಜೂನ್ 1ರಿಂದ 25ರವರೆಗೆ ಡೆವಿಲ್ ಶೂಟಿಂಗ್‌ಗಾಗಿ ವಿದೇಶಕ್ಕೆ ತೆರಳಲು ಅನುಮತಿ ನೀಡಲಾಗಿತ್ತು.
- ಪಶ್ಚಿಮ ಏಷ್ಯಾದ ಉದ್ವಿಗ್ನ ಪರಿಸ್ಥಿತಿ : ಸರ್ವಪಕ್ಷ ಸಭೆ ಕರೆದ ಮೋದಿ ಸರ್ಕಾರ
- ಬೀದರ್: ಅಂತಿಮ ವರ್ಷದ ಎಂಬಿಬಿಎಸ್ ವಿದ್ಯಾರ್ಥಿ ಆತ್ಮಹತ್ಯೆ
- ದೆಹಲಿ ವಿಧಾನಸಭೆ ಸಂಕೀರ್ಣ ಸ್ಫೋಟಿಸುವುದಾಗಿ ಬೆದರಿಕೆ ಇಮೇಲ್
- ಹಿಂದೂ, ಬೌದ್ಧ, ಸಿಖ್ ಬಿಟ್ಟು ಬೇರೆ ಧರ್ಮಕ್ಕೆ ಮತಾಂತರಗೊಂಡರೆ ಪರಿಶಿಷ್ಟ ಜಾತಿ ಸ್ಥಾನಮಾನ ರದ್ದು : ಸುಪ್ರೀಂ
- ಐಪಿಎಲ್-2026 ಪಂದ್ಯಗಳಿಗೆ ವಿಶೇಷ ಮಾರ್ಗಸೂಚಿ ಪ್ರಕಟಿಸಿದ ಪೊಲೀಸ್ ಇಲಾಖೆ

