ಬೆಂಗಳೂರು: ನಟ ದರ್ಶನ್ 49 ದಿನಗಳ ಇಂದು ಕೆಂಗೇರಿಯ ಬಿಜಿಎಸ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ದರ್ಶನ್ ಕುಟುಂಬ ಫಿಸಿಯೋಥೆರಪಿ ಮೂಲಕವೇ ಬೆನ್ನುನೋವು ಗುಣಪಡಿಸಿಕೊಳ್ಳುವ ಪ್ಲ್ಯಾನ್ ಮಾಡಿದೆ, ಹೀಗಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಿಸಿದ್ದಾರೆ. ಆಸ್ಪತ್ರೆಯ ಬಿಲ್ ಸೇರಿದಂತೆ, ಎಲ್ಲಾ ಪ್ರಕ್ರಿಯೆಗಳು ಮುಗಿಯುತ್ತಿದ್ದಂತೆ ದರ್ಶನ್ ತಮ್ಮ ಕಾರಿನಲ್ಲಿ ತೆರಳಿದ್ದಾರೆ. ಬೆನ್ನುನೋವಿಗೆ ಶಸ್ತ್ರಚಿಕಿತ್ಸೆ ಪಡೆಯದೇ 49 ದಿನಗಳ ನಂತರ ದರ್ಶನ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಈ ವೇಳೆ ಕುಂಟುತ್ತಲೇ ಆಸ್ಪತ್ರೆಯಿಂದ ಹೊರ ಬಂದು ತಮ್ಮ ಕಾರಿನ ಮೂಲಕ ತೆರಳಿದ್ದಾರೆ. ಈ ಸಂದರ್ಭದಲ್ಲಿ ಪುತ್ರ ವಿನೀಶ್ ತಂದೆಗೆ ಸಾಥ್ ಕೊಟ್ಟಿದ್ದರು.ನಿನ್ನೆ (ಡಿಸೆಂಬರ್ 17) ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಿಂದ ಪವಿತ್ರಾ ಗೌಡ ರಿಲೀಸ್ ಆಗಿದ್ದರು. ಇಂದು (ಡಿಸೆಂಬರ್ 18) ದರ್ಶನ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಹೊರಬಂದಿದ್ದಾರೆ.
ದರ್ಶನ್ ಅವರು ಡಿಸ್ಚಾರ್ಜ್ ಆದ ಬಳಿಕ ಗೆಳೆಯ ಧನ್ವೀರ್ ಕಾರಿನಲ್ಲಿ ಮಗ ವಿನಿಶ್ ಜೊತೆ ಪತ್ನಿಯ ಫ್ಲಾಟ್ಗೆ ಬಂದಿದ್ದಾರೆ. ಹೊಸಕೆರೆಹಳ್ಳಿಯಲ್ಲಿರುವ ಪತ್ನಿ ವಿಜಯಲಕ್ಷ್ಮಿ ಫ್ಲಾಟ್ಗೆ ಬಂದಿದ್ದು ಅವರೊಂದಿಗೆ ಅವರ ಸಹೋದರ ದಿನಕರ್ ತೂಗುದೀಪ ಹಾಗೂ ಅವರ ಪತ್ನಿಯೂ ಇದ್ದರು.
ನಟ ದರ್ಶನ್ ಇನ್ನು ಮನೆಯಲ್ಲಿಯೇ ಚಿಕಿತ್ಸೆ ಪಡೆಯಲಿದ್ದಾರಂತೆ. ಗಂಡನಿಗೆ ಮನೆಯಲ್ಲಿಯೇ ಫಿಸಿಯೋಥೆರಪಿ ನೀಡಲು ಪತ್ನಿ ವಿಜಯಲಕ್ಷ್ಮಿ ಅವರು ಎಲ್ಲಾ ವ್ಯವಸ್ಥೆಗಳನ್ನು ಕೂಡಾ ಮಾಡಿದ್ದಾರೆ ಎಂದು ಹೇಳಲಾಗಿದೆ.
ದರ್ಶನ್ ಆಸ್ಪತ್ರೆಗೆ ದಾಖಲಾಗಿ 48 ದಿನಗಳಾದರೂ ಸರ್ಜರಿ ಮಾಡಿಸಿಲ್ಲ. ತೀವ್ರ ಬೆನ್ನು ನೋವಿದೆ ಸರ್ಜರಿ ಮಾಡಿಸಬೇಕು ಎಂದು ಮಧ್ಯಂತರ ಜಾಮೀನು ಪಡೆದಿದ್ದ ನಟ ಆಸ್ಪತ್ರೆಗೆ ದಾಖಲಾಗಿದ್ದರು. ಆದರೆ ನಟನಿಗೆ ಸರ್ಜರಿ ಮಾಡಿಸಲಿಲ್ಲ. ನಟನ ಬಿಪಿ ಏರುಪೇರಾಗಿದೆ, ಪತ್ನಿ ವಿಜಯಲಕ್ಷ್ಮಿ ಸೈನ್ ಮಾಡಿಲ್ಲ ಇಂತಹ ಕಾರಣಗಳನ್ನು ಹೇಳಿದ್ದು ನಟನಿಗೆ ಸರ್ಜರಿ ಮಾಡದೆಯೇ ಈಗ ಡಿಸ್ಚಾರ್ಜ್ ಮಾಡಲಾಗಿದೆ.
ರೇಣುಕಾಸ್ವಾಮಿ ಹತ್ಯೆ ಕೇಸ್‌ನಲ್ಲಿ ಎರಡನೇ ಆರೋಪಿಯಾಗಿರುವ ದರ್ಶನ್ ಬೆನ್ನು ನೋವಿನ ಸಮಸ್ಯೆ ನೀಡಿ ಮಧ್ಯಂತರ ಜಾಮೀನು ಪಡೆದಿದ್ದರು.ಬಳ್ಳಾರಿ ಜೈಲಿನಲ್ಲಿದ್ದ ನಟ ದರ್ಶನ್‌ಗೆ ಕಳೆದ ಅಕ್ಟೋಬರ್ 31ರಂದು ಹೈಕೋರ್ಟ್ 6 ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿತ್ತು. ಜಾಮೀನು ಪಡೆದ 2-3 ದಿನಗಳ ಬಳಿಕ ದರ್ಶನ್ ಆಸ್ಪತ್ರೆಗೆ ದಾಖಲಾದರೂ ಫಿಸಿಯೋಥೆರಪಿ ಚಿಕಿತ್ಸೆ ಪಡೆಯುತ್ತಿದ್ದರು.