ಮುಂಬೈ: ಸರ್ಕಾರಿ ಆಯೋಗದಲ್ಲಿ ಉನ್ನತ ಸ್ಥಾನ ನೀಡುವುದಾಗಿ ಭರವಸೆ ನೀಡಿ ಬಾಲಿವುಡ್ ನಟಿ ದಿಶಾ ಪಟಾನಿ ಅವರ ತಂದೆ ಜಗದೀಶ್ ಸಿಂಗ್ ಪಟಾನಿ ಅವರಿಗೆ ವಂಚಕರು 25 ಲಕ್ಷ ರೂಪಾಯಿ ವಂಚಿಸಿದ್ದಾರೆ. ಶುಕ್ರವಾರ ಸಂಜೆ ಬರೇಲಿ ಕೊತ್ವಾಲಿ ಪೊಲೀಸ್ ಠಾಣೆಯಲ್ಲಿ ಈ ಬಗ್ಗೆ ಎಫ್ಐಆರ್ ದಾಖಲಾಗಿದೆ.
ಪಟಾನಿಗೆ ಕರೆ ಬಂದಿದ್ದು, ವಂಚಕನು ಯುಪಿ ಸರ್ಕಾರದ ಉನ್ನತ ಅಧಿಕಾರಿಗಳೊಂದಿಗೆ ಸಂಪರ್ಕ ಹೊಂದಿರುವುದಾಗಿ ಹೇಳಿಕೊಂಡಿದ್ದಾನೆ ಮತ್ತು ಹಣವನ್ನು ಪಾವತಿಸಿದರೆ ಅವರನ್ನು ಯುಪಿ ರಾಜ್ಯ ಸರ್ಕಾರದ ಕಾರ್ಪೊರೇಷನ್ ಸಂಸ್ಥೆಯ ಅಧ್ಯಕ್ಷರನ್ನಾಗಿ ನೇಮಿಸುವುದಾಗಿ ಭರವಸೆ ನೀಡಿದ್ದಾನೆ. ಪಟಾನಿ ವಂಚನೆಗೆ ಬಲಿಯಾದರು ಮತ್ತು ನಕಲಿ ಬ್ಯಾಂಕ್ ಖಾತೆಗಳಿಗೆ 20 ಲಕ್ಷ ರೂಪಾಯಿಗಳನ್ನು ವರ್ಗಾಯಿಸಿದ್ದಾರೆ ಮತ್ತು 5 ಲಕ್ಷ ರೂಪಾಯಿ ನಗದು ನೀಡಿದ್ದಾರೆ.
ಮೂರು ತಿಂಗಳಾದರೂ ಯಾವುದೇ ಪ್ರಗತಿ ಕಾಣದಿದ್ದಾಗ ಆರೋಪಿಗಳು ಬಡ್ಡಿ ಸಮೇತ ಹಣವನ್ನು ಹಿಂದಿರುಗಿಸುವುದಾಗಿ ಭರವಸೆ ನೀಡಿದ್ದಾರೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಹಣ ಕೊಟ್ಟರೂ ಕೆಲಸ ಆಗದೇ ಇದ್ದಾಗ ಪಟಾನಿಗೆ ತಾನು ಮೋಸ ಹೋಗಿರುವುದು ಅರಿವಾಯಿತು. ನಂತರ ಬರೇಲಿ ಪೊಲೀಸರಿಗೆ ದೂರು ನೀಡಿದ್ದು, ಇದೀಗ ಎಫ್ಐಆರ್ ದಾಖಲಾಗಿದೆ. ಪಟಾನಿ ತನ್ನ ಹಣವನ್ನು ಹಿಂತಿರುಗಿಸಲು ಒತ್ತಾಯಿಸಿದಾಗ, ಅವರು ಬೆದರಿಕೆಗಳನ್ನು ನೀಡಲು ಪ್ರಾರಂಭಿಸಿದರು ಎಂದು ಪೊಲೀಸರು ತಿಳಿಸಿದ್ದಾರೆ. ಇದೀಗ ಈ ಬಗ್ಗೆ ಎಫ್ಐಆರ್ ದಾಖಲಾಗಿದೆ. ಈ ಬಗ್ಗೆ ಸ್ಥಳೀಯ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಘಟನೆಯ ಬಗ್ಗೆ ದಿಶಾ ಮತ್ತು ಅವರ ಕುಟುಂಬ ಸದಸ್ಯರು ಇನ್ನೂ ಅಧಿಕೃತ ಹೇಳಿಕೆ ನೀಡಿಲ್ಲ.