ವಿಶ್ವಸುಂದರಿ ಐಶ್ವರ್ಯ ರೈ (Aishwarya Rai) ಅವರು ಕಾನ್ ಫಿಲ್ಮ್ ಫೆಸ್ಟಿವಲ್ (Cannes Film Festival) ರೆಡ್ ಕಾರ್ಪೆಟ್ (Red Crapet) ಮೇಲೆ ಹೆಜ್ಜೆ ಹಾಕಲು ರೆಡಿಯಾಗಿದ್ದಾರೆ. ವಿಶ್ವದ ಪ್ರತಿಷ್ಠಿತ ಚಲನಚಿತ್ರೋತ್ಸವಗಳಲ್ಲಿ ಕಾನ್ ಫಿಲ್ಮ್ ಫೆಸ್ಟಿವಲ್ ಕೂಡ ಒಂದು. ಮೇ 14ರಿಂದ ಕಾನ್ ಫಿಲ್ಮ್ ಫೆಸ್ಟಿವಲ್ ಆರಂಭ ಆಗಿದೆ.
ಪ್ರತಿ ವರ್ಷದಂತೆ ಈ ವರ್ಷವೂ ಐಶ್ವರ್ಯ ರೈ ಕಾನ್ ಫಿಲ್ಮ್ ಫೆಸ್ಟಿವಲ್ ರೆಡ್ ಕಾರ್ಪೆಟ್‌ನಲ್ಲಿ ಹೆಜ್ಜೆ ಹಾಕಲು ಎಲ್ಲ ರೀತಿಯ ತಯಾರಿಗಳನ್ನು ಮಾಡಿಕೊಳ್ಳಲಾಗುತ್ತಿದೆ. ಇದೇ ವೇಳೆ ಐಶ್ವರ್ಯ ಅವರು ಮೇ 15ರಂದು ತಮ್ಮ ಮಗಳು ಆರಾಧ್ಯ ಜೊತೆ ವಿಮಾನ ನಿಲ್ದಾಣಕ್ಕೆ ಬಂದಿದ್ದರು. ಈ ವೇಳೆ, ಐಶ್ವರ್ಯ ಅವರ ಕೈಗೆ ಪೆಟ್ಟಾಗಿ ಬ್ಯಾಂಡೇಜ್ ಸುತ್ತಿಕೊಂಡಿದ್ದರು. ಅವರ ಈ ಸ್ಥಿತಿ ನೋಡಿ ಅಭಿಮಾನಿಗಳು ಅತಂಕಕ್ಕೆ ಒಳಗಾಗಿ ಆರೋಗ್ಯ ವಿಚಾರಿಸಿದ್ದಾರೆ. ಇದನ್ನೂ ಓದಿ: ಮೋದಿ ಗ್ಯಾರಂಟಿಗೆ ತಾಜಾ ಉದಾಹರಣೆ ಸಿಎಎ: ಮೋದಿ
ಐಶ್ವರ್ಯ ಅವರು ಮಗಳ ಜೊತೆ ಕಾರಿನಿಂದ ಇಳಿದಿದ್ದಾರೆ. ಅವರ ಬಲಗೈಗೆ ಬ್ಯಾಂಡೇಜ್ ಹಾಕದ್ದಾರೆ. ಐಶ್ವರ್ಯ ಕಪ್ಪು ಉಡುಪಿನೊಂದಿಗೆ ನೀಲಿ ಕೋಟ್ ಧರಿಸಿದ್ದರು. ಆರಾಧ್ಯ ಅವರು ತಿಳಿ ನೀಲಿ ಹೂಡಿ ಮತ್ತು ಕಪ್ಪು ಪ್ಯಾಂಟ್‌ನಲ್ಲಿ ಕಾಣಿಸಿಕೊಂಡರು. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಅಸಲಿಗೆ ಐಶ್ರ‍್ಯಾ ಕೈಗೆ ಏನಾಗಿದೆ ಎಂಬುದು ತಿಳಿದು ಬಂದಿಲ್ಲ. ಇದನ್ನೂ ಓದಿ: ನವಜಾತ ಗಂಡು ಶಿಶುವನ್ನು ಚರಂಡಿಗೆ ಎಸೆದು ತಾಯಿ ಎಸ್ಕೇಪ್!
ಬಲಗೈಗೆ ಬ್ಯಾಂಡೇಜ್ ಕಟ್ಟಿಕೊಂಡಿರುವ ಐಶ್ವರ್ಯ ಕೈ ನೋವಿನ ನಡುವೆಯೂ ಕಾನ್ಸ್ ಫೆಸ್ಟಿವಲ್‌ನಲ್ಲಿ ಹೇಗೆ ಕಾಣಿಸಿಕೊಳ್ತಾರೆ ಎಂಬುದನ್ನು ನೋಡಲು ಫ್ಯಾನ್ಸ್ ಕಾಯ್ತಿದ್ದಾರೆ. ಇದನ್ನೂ ಓದಿ: ಮೋದಿ ಅಮಿತ್ ಶಾರನ್ನ ಪ್ರಧಾನಿ ಮಾಡಲು ಮತ ಕೇಳುತ್ತಿದ್ದಾರೆ: ಕೇಜ್ರಿವಾಲ್

