ಅಭಿನಯದಿಂದ ದೂರ ಉಳಿದಿರುವ ಸ್ಯಾಂಡಲ್ವುಡ್ ಕ್ವಿನ್ ರಮ್ಯಾ ತಮ್ಮ ಜನ್ಮದಿನವನ್ನು ಕೀನ್ಯಾದ ರಾಷ್ಟ್ರೀಯ ಮೀಸಲು ಪ್ರದೇಶದಲ್ಲಿ ಆಚರಿಸಿಕೊಂಡಿದ್ದಾರೆ. ಸದ್ಯ ಬರ್ಥ್ ಡೇ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ರಮ್ಯಾ ಗೆಳೆಯ ಸಂಜೀವ್ ಮೋಹನ್ ಅವರು ಈ ಫೋಟೋಗಳನ್ನು ಹಂಚಿಕೊಂಡಿದ್ದಾರೆ.
ರಮ್ಯಾ ಕೀನ್ಯಾದ ಮಸಾಯಿ ಮಾರ ರಾಷ್ಟ್ರೀಯ ಮೀಸಲು ಭಾಗದಲ್ಲಿ ಗೆಳೆಯರ ಜೊತೆ ಈ ಭಾಗದಲ್ಲಿ ಸುತ್ತಾಟ ನಡೆಸಿ ಜನ್ಮದಿನ ಆಚರಿಸಿಕೊಂಡಿದ್ದಾರೆ. ಪ್ರತಿ ಬಾರಿ ಜನ್ಮದಿನಕ್ಕೆ ಅವರು ನಾನಾ ಕಡೆಗಳಲ್ಲಿ ಸುತ್ತಾಟ ನಡೆಸುತ್ತಾರೆ,
ರಮ್ಯಾ ಅವರ ಆಪ್ತ ಸಂಜೀವ್ ಮೋಹನ್ ಎಂಬುವವರು ಅವರ ಫೋಟೋನ ಪೋಸ್ಟ್ ಮಾಡಿದ್ದಾರೆ. ರಮ್ಯಾ ಅವರಿಗೆ ಸಂಜೀವ್ ಜೊತೆ ಒಳ್ಳೆಯ ಗೆಳೆತನ ಇದೆ. ಈ ಮೊದಲಿನಿಂದಲೂ ಸಂಜೀವ್ ಅವರು ಇನ್ಸ್ಟಾಗ್ರಾಮ್ನಲ್ಲಿ ರಮ್ಯಾ ಫೋಟೋಗಳನ್ನು ಹಂಚಿಕೊಳ್ಳುತ್ತಾ ಬರುತ್ತಿದ್ದಾರೆ. ಈಗ ಹಂಚಿಕೊಂಡಿರೋ ಫೋಟೋ ಗಮನ ಸೆಳೆದಿದೆ.
‘ಹ್ಯಾಪಿ ಬರ್ತ್ಡೇ ದಿವು. ಯಾವಾಗಲೂ ಪ್ರೀತಿಸುತ್ತೇನೆ. ನಿಮ್ಮ ಜೊತೆ ಇರೋದು ಯಾವಾಗಲೂ ಸುಂದರವಾಗಿರುತ್ತದೆ’ ಎಂದು ಸಂಜೀವ ಪೋಸ್ಟ್ ಮಾಡಿದ್ದಾರೆ. ಈ ಪೋಸ್ಟ್ಗೆ ಮಸಾಯಿ ಮಾರ, ಕೀನ್ಯಾ ಎಂದು ಲೊಕೇಶನ್ ನೀಡಿದ್ದಾರೆ. ಸದ್ಯ ಸಂಜೀವ್ ಅವರು ಕೀನ್ಯಾದಲ್ಲಿಯೇ ಇದ್ದಾರೆ. ಮಸಾಯಿ ಮಾರದಲ್ಲಿರುವ ಫೋಟೋಗಳನ್ನು ಸ್ಟೇಟಸ್ನಲ್ಲಿ ಹಂಚಿಕೊಳ್ಳುತ್ತಾ ಇದ್ದಾರೆ.