ಲಾಹೋರ್ : ಅಲ್ ಖಾದಿರ್ ಯೂನಿವರ್ಸಿಟಿಯ ಅಭಿವೃದ್ಧಿ ಟ್ರಸ್ಟ್ ಗೆ ಸೇರಿದ 1.9 ಕೋಟಿ ಪೌಂಡ್ ಮೊತ್ತದ ಹಣವನ್ನು ದುರುಪಯೋಗ ಪಡಿಸಿಕೊಂಡ ಆರೋಪ ಎದುರಿಸುತ್ತಿರುವ ಪಾಕಿಸ್ತಾನದ ಮಾಜಿ ಪ್ರಧಾನಿ ಹಾಗೂ ನಿವೃತ್ತ ಕ್ರಿಕೆಟಿಗ ಇಮ್ರಾನ್ ಖಾನ್ ದಂಪತಿಗಳಿಗೆ ಜೈಲು ಶಿಕ್ಷೆ ನೀಡಿ ನ್ಯಾಯಾಲಯ ಆದೇಶ ಹೊರಡಿಸಿದೆ.
ಇಮ್ರಾನ್ ಖಾನ್ ಗೆ 14 ವರ್ಷ ಹಾಗೂ ಪತ್ನಿ ಬುಶ್ರಾ ಬೀಬಿಗೂ ಸಹ 7 ವರ್ಷ ಶಿಕ್ಷೆ ವಿಧಿಸಲಾಗಿದೆ. ಜೊತೆಗೆ ಇಮ್ರಾನ್ ಖಾನ್ ಗೆ ಹತ್ತು ಲಕ್ಷ ಪಾಕಿಸ್ತಾನಿ ರೂಪಾಯಿ ಹಾಗೂ ಪತ್ನ್ ಬುಶ್ರಾ ಬೀಬಿಗೆ 5 ಲಕ್ಷ ರೂ. ದಂಡ ವಿಧಿಸಲಾಗಿದೆ.
ಕಳೆದ ವರ್ಷವೇ ಈ ಆರೋಪದ ಮೇಲೆ ಜೈಲು ಸೇರಿದ್ದ ಇಮ್ರಾನ್ ಖಾನ್ ವಿಚಾರಣೆ ಎದುರಿಸುತ್ತಿದ್ದರು. ಡಿಸೆಂಬರ್ ನಲ್ಲಿ ವಿಚಾರಣೆ ಪೂರ್ಣಗೊಂಡ ಬಳಿಕ ತೀರ್ಪನ್ನು ಕಾಯ್ದಿರಿಸಲಾಗಿತ್ತು.
ಮೂರು ಬಾರಿ ವಿಚಾರಣೆಯನ್ನು ಮುಂದೂಡಿದ ಬಳಿಕ ಇಮ್ರಾನ್ ಖಾನ್ ವಿಚಾರಣೆಗೆ ಹಾಜರಾಗಲು ನಿರಾಕರಿಸಿದ್ದರು. ಬಳಿಕ ಅವರನ್ನು ಒತ್ತಾಯಪೂರ್ವಕವಾಗಿ ಕೋರ್ಟಿಗೆ ಹಾಜರು ಪಡಿಲಾಗಿತ್ತು. ಅವರ ಪತ್ನಿಯನ್ನು ಕೋರ್ಟ್ ಆವರಣಲದಲ್ಲಿಯೇ ಬಂಧಿಸಲಾಗಿತ್ತು.