ಬೆಂಗಳೂರು: ಬೆಂಗಳೂರು ಗ್ರಾಮಂತಾರ ಕ್ಷೇತ್ರದಲ್ಲಿ ತಮ್ಮ ಸಹೋದರ ಡಿಕೆ ಸುರೇಶ್‌ಗೆ ಮತ ನೀಡುವಂತೆ ಮತದಾರರಿಗೆ ಬೆದರಿಕೆ ಹಾಕಿರುವ ಆರೋಪದಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ವಿರುದ್ಧ ಬಿಜೆಪಿ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.
ದೂರಿನಲ್ಲಿ ಏನಿದೆ?
ಬೆಂಗಳೂರು ದಕ್ಷಿಣ ಮತ್ತು ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರಗಳ ಅಪಾರ್ಟ್ಮೆಂಟ್ ನಿವಾಸಿಗಳಿಗೆ ಕಾವೇರಿ ನೀರು ಸಂಪರ್ಕ, ಸಿಎ ನಿವೇಶನ ಮತ್ತು ಹಕ್ಕುಪತ್ರ ಹಸ್ತಾಂತರಿಸಬೇಕು ಎಂದರೆ ನೀವು ಸುರೇಶ್‌ಗೆ ಮತ ನೀಡಬೇಕು ಎಂದು ಶಿವಕುಮಾರ್ ಹೇಳಿದ್ದಾರೆ ಎಂದು ಬಿಜೆಪಿ ದೂರಿನಲ್ಲಿ ಉಲ್ಲೇಖಿಸಿದೆ. ಶಿಕುಮಾರ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುರ ಜೊತೆಗೆ ಕಾಂಗ್ರೆಸ್ ಸ್ಟಾರ್ ಪ್ರಚಾರಕರ ಪಟ್ಟಿಯಿಂದ ಅವರನ್ನು ತೆಗೆದುಹಾಕಬೇಕು ಎಂದು ಬಿಜೆಪಿ ಆಗ್ರಹಿಸಿದೆ. ಇದನ್ನೂ ಓದಿ: ನಗರಸಭೆ ಉಪಾಧ್ಯಕ್ಷೆ ಪುತ್ರ ಸೇರಿ ಮಲಗಿದ್ದಲ್ಲೇ ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ
ಜೊತೆಗೆ ಇನ್ನೊಂದು ದೂರಿನಲ್ಲಿ ಚಿಕ್ಕರಾಜೇನಹಳ್ಳಿ (ಕುಣಿಗಲ್) ನಲ್ಲಿರುವ ಪ್ರೇಮ್ ಕುಮಾರ್/ ಪಿ.ಜಿ. ರಾಮಯ್ಯ ಎಂಬುವರಿಗೆ ಸೇರಿದ ಜಮೀನಿಗೆ ಕಂಗ್ರೆಸ್ ಕಾರ್ಯಕರ್ತರ ಇತ್ತಾಯದ ಮೇರೆಗೆ ಬೆಂಕಿ ಹಚ್ಚಲಾಗಿದೆ ಎಂದು ಬಿಜೆಪಿ ಆರೋಪಿಸಿದೆ. ಪ್ರಕರಣಧಲ್ಲಿ ಯಾವದೇ ಕ್ರಮ ಕೈಗೊಳ್ಳದ ಸಂಬಂಧಪಟ್ಟ ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳೀಸುವಂತೆ ಬಿಜೆಪಿ ಒತ್ತಾಯಿಸಿದೆ. ಇದನ್ನೂ ಓದಿ: ಇಂದು ಮೊದಲ ಅಂತದ ಮತದಾನ