ಕುಣಿಗಲ್ : ಪಟ್ಟಣದ ನೂತನ ಬಿಜೆಪಿ ಅಧ್ಯಕ್ಷರಾಗಿ ಅಮರನಾಥ ಶೆಟ್ಟಿ ಅವರು ನೇಮಕಗೊಂಡಿದ್ದಾರೆ, ನೂತನ ಅಧ್ಯಕ್ಷರಾಗಿ ನೇಮಕಗೊಂಡ ನಂತರ ಪತ್ರಕರ್ತರೊಂದಿಗೆ ಮಾತನಾಡಿದ ಅವರು ಹಲವು ವರ್ಷಗಳಿಂದ ಹಿರಿಯ ಮುಖಂಡರ ಸಮ್ಮುಖದಲ್ಲಿ ನಾನು ಪಕ್ಷದ ಕಾರ್ಯ ಚಟುವಟಿಕೆಯನ್ನು ನೋಡಿ ನಾನು ಕೂಡ ಸಮಾಜದಲ್ಲಿ ಉತ್ತಮವಾದ ಸಮಾಜ ಸೇವೆಯಲ್ಲಿ ತೊಡಗಬೇಕು ಎಂಬ ಗುರಿ ಇಟ್ಟುಕೊಂಡಿದ್ದೇನೆ ಎಂದು ತಿಳಿಸಿದರು,,
ನಮ್ಮ ಹಿರಿಯ ಬಿಜೆಪಿ ಮುಖಂಡರು ಹಾಗೂ ಮಾಜಿ ಅಧ್ಯಕ್ಷರು ಸಂಘಟನಾ ಚತುರರು ಆದ” ಡಿ ಕೃಷ್ಣಕುಮಾರ್” ರವರ ಮಾರ್ಗದರ್ಶನದಲ್ಲಿ ಮತ್ತು ತಾಲೂಕು ಘಟಕದ ಅಧ್ಯಕ್ಷರಾದ ದಿನೇಶ್, ಮತ್ತು ಮಾಜಿ ಅಧ್ಯಕ್ಷರಾದ ಕೆ ಎಸ್ ಬಲರಾಮ್, ರವರ ಹಾಗೂ ಹಿರಿಯ ಕಾರ್ಯಕರ್ತರ ಸಲಹೆ ಸೂಚನೆಯ ಮೇರೆಗೆ ನಾನು ನಗರ ಘಟಕದ ಬಿಜೆಪಿ ಪಕ್ಷದ ಎಲ್ಲಾ ಕಾರ್ಯಕರ್ತರ ವಿಶ್ವಾಸ ಗಳಿಸುವ ಮೂಲಕ ಪಕ್ಷದ ಎಲ್ಲಾ ರೀತಿಯ ಚಟುವಟಿಕೆಗಳನ್ನು ಚಾಚು ತಪ್ಪದೇ ಪಾಲಿಸುತ್ತೇನೆ ಎಂದು ಮಾತನಾಡಿದರು,,
ನಮ್ಮ ಕಾರ್ಯಕರ್ತರಲ್ಲಿ ಯಾವುದೇ ರೀತಿ ವೈಮನಸ್ಸು ಬಾರದ ರೀತಿಯಲ್ಲಿ ಸಂಘಟನೆಯನ್ನು ಮಾಡುವ ಮೂಲಕ ಕಾರ್ಯಕ್ರಮಗಳನ್ನು ನೆರವೇರಿಸಲಾಗುವುದು ಎಂದರು
ಸಂಸದರ ಆಗಮನ :
ಏಪ್ರಿಲ್ ಐದರಂದು ಶನಿವಾರ ಬಿಳಿ ದೇವಾಲಯ ಶ್ರೀರಂಗನಾಥ ಸ್ವಾಮಿ ಬೆಟ್ಟದ ರಸ್ತೆಯಲ್ಲಿರುವ ಎಸ್ ಆರ್ ಎಸ್ ಸಮುದಾಯ ಭವನದಲ್ಲಿ ನೂತನ ಅಧ್ಯಕ್ಷರ ಪದಗ್ರಹಣ ಹಾಗೂ ಪದಾಧಿಕಾರಿಗಳ ಆಯ್ಕೆಯ ಕಾರ್ಯಕ್ರಮವನ್ನು ಆಯೋಜಿಸಲಾಗಿದ್ದು ಅಂದು ನಮ್ಮ ನೆಚ್ಚಿನ ಬೆಂಗಳೂರು ಗ್ರಾಮಾಂತರ ಸಂಸದರಾದ ಡಾ “ಸಿ ಎನ್ ಮಂಜುನಾಥ್ ಅವರು ಸಹ ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವುದರಿಂದ ಹೆಚ್ಚಿನ ಜನಸಂಖ್ಯೆಯಲ್ಲಿ ಪಕ್ಷದ ಎಲ್ಲಾ ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ಮನವಿ ಮಾಡಿದರು,,
ವರದಿ : ನರಸಿಂಹರಾಜು