ತಿರುಪತಿ: ಲೋಕಸಭಾ ಚುನಾವಣೆಯ (Lokasabha election) ಬಹಿರಂಗ ಪ್ರಚಾರ ಮುಗಿದ ಬೆನ್ನಲ್ಲೇ ಗೃಹ ಸಚಿವ ಅಮಿತ್ ಶಾ (Amit Shah) ಪತ್ನಿ ಸೋನಲ್ ಶಾ ಜೊತೆಗೆ ತಿರುಪತಿ (Tirupati) ದೇವಸ್ಥಾನಕ್ಕೆ ಭೇಟಿ ನೀಡಿ ತಿಮ್ಮಪ್ಪನ ದರ್ಶನ ಪಡೆದಿದ್ದಾರೆ.
ಆಂಧ್ರಪ್ರದೇಶದ ತಿರುಮಲದಲ್ಲಿರುವ ತಿರುಪತಿ ವೆಂಕಟರಮಣ ದೇವಸ್ಥಾನದಲ್ಲಿ (Tirupati Balaji Temple) ಅಮಿತ್ ಶಾ ಸಾಷ್ಟಾಂಗ ನಮಸ್ಕಾರ ಮಾಡಿ ಪ್ರಾರ್ಥನೆ ಸಲ್ಲಿಸಿದ್ದಾರೆ. ಇದನ್ನೂ ಓದಿ: ಏರ್‌ಪೋರ್ಟ್‌ನಲ್ಲಿ 3 ಅಧಿಕಾರಿಗಳಿಂದ ಪ್ರಜ್ವಲ್ ಬಂಧನ
ಭೇಟಿ ಬಳಿಕ ಸಾಮಾಜಿಕ ಜಾಲತಾಣದಲ್ಲಿ ಶ್ರೀ ವೆಂಕಟೇಶ್ವರ ಸ್ವಾಮಿಯ ಕೃಪೆಯು ಪ್ರತಿಯೊಬ್ಬರ ಜೀವನದಲ್ಲಿ ಮೇಲಿರಲಿ. ಎಲ್ಲರಿಗೂ ಉತ್ತಮ ಆರೋಗ್ಯ ಮತ್ತು ಸಮೃದ್ಧಿಯನ್ನು ತರಲಿ ಎಂದು ತಮ್ಮ ಏಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದಾರೆ ಇದನ್ನೂ ಓದಿ: ರಾಜ್ಯದಲ್ಲಿ ನಾಳೆಯಿಂದ 5 ದಿನ ಮದ್ಯ ಮಾರಾಟ ಬಂದ್!
ಲೋಕಸಭಾ ಚುನಾವಣೆಯ (Lok Sabha Election) ಕೊನೆಯ ಮತ್ತು 7ನೇ ಹಂತದ ಚುನಾವಣೆಯ ಬಹಿರಂಗ ಪ್ರಚಾರ ಗುರುವಾರ ಅಂತ್ಯವಾಗಿದ್ದು ಶನಿವಾರ ಚುನಾವಣೆ ನಡೆಯಲಿದೆ. ಶನಿವಾರ ಸಂಜೆಯಿಂದ ಚುನಾವಣೋತ್ತರ ಸಮೀಕ್ಷೆಗಳು ಪ್ರಕಟವಾಗಲಿದ್ದು ಜೂನ್ 4 ರಂದು ಫಲಿತಾಂಶ ಪ್ರಕಟವಾಗಲಿದೆ. ಇದನ್ನೂ ಓದಿ: ಕಬಿನಿಯಲ್ಲಿ ವಿಶ್ರಾಂತಿ ಪಡೆಯಲು ತೆರೆಳಿದ ಹೆಚ್‌ಡಿಕೆ ಕುಟುಂಬ

