ಶ್ರೀನಗರ: ಜಮ್ಮು ಕಾಶ್ಮೀರದಲ್ಲಿ 370ನೇ ವಿಧಿಯನ್ನು ಮರುಸ್ಥಾಪಿಸಲು ಕಾಂಗ್ರೆಸ್ ಪ್ರಯತ್ನಿಸುತ್ತಿದೆ, ನಿಮ್ಮ ನಾಲ್ಕನೇ ತಲೆಮಾರಿನವರು ಕೂಡ 370ನೇ ವಿಧಿಯನ್ನು ಮರಳಿ ತರಲು ಸಾಧ್ಯವಿಲ್ಲ ಎಂದು ನಾನು ರಾಹುಲ್ ಗಾಂಧಿಗೆ ಎಚ್ಚರಿಕೆ ನೀಡುತ್ತೇನೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಗುಡುಗಿದ್ದಾರೆ.
ಕಾಶ್ಮೀರ ಭಾರತದ ಅವಿಭಾಜ್ಯ ಅಂಗವಾಗಿದೆ. ನಿಮ್ಮ ನಾಲ್ಕನೇ ತಲೆಮಾರಿನವರು ಕೂಡ 370ನೇ ವಿಧಿಯನ್ನು ಮರಳಿ ತರಲು ಸಾಧ್ಯವಿಲ್ಲ ಎಂದು ನಾನು ರಾಹುಲ್ ಗಾಂಧಿಗೆ ಎಚ್ಚರಿಕೆ ನೀಡುತ್ತೇನೆ ಎಂದು ಅಮಿತ್ ಶಾ ಗುಡುಗಿದ್ದಾರೆ.
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸಂವಿಧಾನದ ನಕಲಿ ಪ್ರತಿಯನ್ನು ತೋರಿಸುವ ಮೂಲಕ ಅವಮಾನಿಸಿದ್ದಾರೆ ಮತ್ತು ಅಪಹಾಸ್ಯ ಮಾಡಿದ್ದಾರೆ ಎಂದು ಅಮಿತ್ ಶಾ ಆರೋಪಿಸಿದ್ದಾರೆ. ಸಂವಿಧಾನವನ್ನು ಅಪಹಾಸ್ಯ ಮಾಡಬೇಡಿ. ಇದು ನಂಬಿಕೆಯ ಪ್ರಶ್ನೆಯಾಗಿದೆ.ಸಂವಿಧಾನದ ನಕಲಿ ಪ್ರತಿಯನ್ನು ತೋರಿಸುವ ಮೂಲಕ ಬಿ.ಆರ್ ಅಂಬೇಡ್ಕರ್ ಮತ್ತು ಸಂವಿಧಾನ ರಚನಾ ಸಭೆಗೆ ಅವಮಾನ ಮಾಡಿದ್ದೀರಿ ಎಂದು ಅಮಿತ್ ಶಾ ಹೇಳಿದ್ದಾರೆ.
ಕಾಂಗ್ರೆಸ್ ಪಕ್ಷವು ಸಂವಿಧಾನವನ್ನು ಅಪಹಾಸ್ಯ ಮಾಡಿದೆ ಎಂದು ಪಲಮುದಲ್ಲಿ ಬಿಜೆಪಿ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ಅಮಿತ್ ಶಾ ಆರೋಪಿಸಿದ್ದಾರೆ. ನವೆಂಬರ್ 26ನ್ನು ಸಂವಿಧಾನ ದಿನವನ್ನಾಗಿ ಆಚರಿಸಲು ಪ್ರಧಾನಿ ನರೇಂದ್ರ ಮೋದಿ ನಿರ್ಧರಿಸಿದ್ದಾರೆ ಎಂದಿದ್ದಾರೆ. .
ಅಲ್ಪಸಂಖ್ಯಾತರಿಗೆ ಮೀಸಲಾತಿ ಜಾರಿಗೊಳಿಸಲು ಬಿಜೆಪಿ ಎಂದಿಗೂ ಕಾಂಗ್ರೆಸ್‌ಗೆ ಅವಕಾಶ ನೀಡುವುದಿಲ್ಲ ಎಂದು ಅಮಿತ್ ಶಾ ಹೇಳಿದ್ದಾರೆ.

