ಬೆಂಗಳೂರು: ಆಂಧ್ರಪ್ರದೇಶ ರಾಜ್ಯದ ಉಪಮುಖ್ಯಮಂತ್ರಿ ಜನಸೇವಾ ಪಕ್ಷದ ಮುಖಂಡ ಪವನ್ ಕಲ್ಯಾಣ್ ಅವರು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಾವೇರಿ ನಿವಾಸದಲ್ಲಿ ಭೇಟಿಯಾದರು.
ಗುರುವಾರ ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಗೃಹ ಕಛೇರಿ ಕೃಷ್ಣದಲ್ಲಿ ಆಂಧ್ರ ಪ್ರದೇಶದ ಉಪಮುಖ್ಯಮಂತ್ರಿ, ಜನಸೇವಾ ಪಕ್ಷದ ನಾಯಕ ಪವನ್ ಕಲ್ಯಾಣ್ ಭೇಟಿಯಾಗಿ ಮಾತುಕತೆ ನಡೆಸಿದರು. ಈ ಭೇಟಿ ಕುತೂಹಲಕ್ಕೆ ಕಾರಣವಾಗಿದೆ.
ಅರಣ್ಯ ಇಲಾಖೆ ಸಭೆ ಹಿನ್ನೆಲೆ ಬೆಂಗಳೂರಿಗೆ ಪವನ್ ಕಲ್ಯಾಣ್ ಆಗಮಿಸಿದ್ದಾರೆ. ಸಭೆ ಆರಂಭಕ್ಕೂ ಮುನ್ನ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಕೆಲ ಸಮಯ ಮಾತುಕತೆ ನಡೆಸಿದ್ದಾರೆ. ಈ ವೇಳೆ, ಸಚಿವರಾದ ಜಮೀರ್ ಅಹಮದ್‌ರನ್ನು ಕೂಡ ನಟ ಭೇಟಿಯಾಗಿದ್ದಾರೆ.
2024ರ ವಿಧಾಸನಭೆ ಚುನಾವಣೆ ಬಳಿಕ ಆಂಧ್ರ ಪ್ರದೇಶದಲ್ಲಿ ತೆಲುಗು ದೇಶಂ ಪಕ್ಷ (ಟಿಡಿಪಿ), ಪವನ್ ಕಲ್ಯಾಣ್ ನೇತೃತ್ವದ ಜನಸೇನಾ ಪಕ್ಷ, ಬಿಜೆಪಿ ಮೈತ್ರಿಕೂಟದ ಸರ್ಕಾರ ರಚನೆಯಾಗಿದೆ. ಚಂದ್ರಬಾಬು ನಾಯ್ಡು ಮುಖ್ಯಮಂತ್ರಿ, ಪವನ್ ಕಲ್ಯಾಣ್ ಉಪ ಮುಖ್ಯಮಂತ್ರಿ.
ಪವನ್ ಕಲ್ಯಾಣ್ ಮೊದಲ ಬಾರಿಗೆ ಶಾಸಕರಾದ ಪವನ್ ಕಲ್ಯಾಣ್ ಉಪ ಮುಖ್ಯಮಂತ್ರಿ ಹುದ್ದೆಯನ್ನು ಪಡೆದಿದ್ದಾರೆ. ಅಲ್ಲದೇ ಅವರು ಪಂಚಾಯತ್ ರಾಜ್. ಗ್ರಾಮೀಣಾಭಿವೃದ್ಧಿ ಮತ್ತು ಗ್ರಾಮೀಣ ನೀರು ಸರಬರಾಜು. ಪರಿಸರ ಮತ್ತು ಅರಣ್ಯ ಹಾಗೂ ವಿಜ್ಞಾನ ಮತ್ತು ತಂತ್ರಜ್ಞಾನ ಖಾತೆಯ ಸಚಿವರೂ ಹೌದು.

