ಬೆಂಗಳೂರು: ಶಾಲೆಗಳಲ್ಲಿ ಶಿಶುಪಾಲನ ಕೇಂದ್ರಗಳ ಪ್ರಾರಂಭಕ್ಕೆ ವಿರೋಧಿಸಿ ಅಂಗನವಾಡಿ ಕಾರ್ಯಕರ್ತೆಯರು ಬೃಹತ್ ಪ್ರತಿಭಟನೆಗೆ ಸಜ್ಜಾಗಿದ್ದಾರೆ.
ಶಾಲೆಗಳಲ್ಲಿ ಶಿಶುಪಾಲನ ಕೇಂದ್ರಗಳ ಪ್ರಾರಂಭ ಮಾಡುವಂತೆ ಶಿಕ್ಷಣ ಇಲಾಖೆ ಹೊಸ ನಿರ್ಧಾರ ಕೈಗೊಂಡಿತ್ತು. ಇದಕ್ಕೆ ಅಂಗನವಾಡಿ ಕಾರ್ಯಕರ್ತೆಯರು ಸಿಡಿದೆದ್ದಿದ್ದಾರೆ. ಅವರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಪ್ರತಿಭಟನೆ ನಡೆಸಲು ಸಜ್ಜಾಗಿದ್ದಾರೆ. ಇದನ್ನೂ ಓದಿ: ಮುಂದುವರಿದ ಬಾಂಬ್ ಬೆದರಿಕೆ- ಮುಂಬೈನ 50 ಕ್ಕೂ ಅಧಿಕ ಆಸ್ಪತ್ರೆಗಳಿಗೆ ಬೆದರಿಕೆ ಕರೆ
ಸರ್ಕಾರಿ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ತರಗತಿ ಆರಂಭಕ್ಕೆ ತೀವ್ರ ವಿರೋಧ ಹಿನ್ನೆಲೆ ಅಂಗನವಾಡಿ ಕಾರ್ಯಕರ್ತೆಯರು ಪ್ರತಿಭಟನೆ ಮಾಡಲು ತಯಾರಿ ನಡೆಸಿದ್ದಾರೆ.
ಇಂದು ಇದರ ಬಗ್ಗೆ ಮಧ್ಯಾಹ್ನ 12 ಗಂಟೆಗೆ AITUC ಕಚೇರಿಯಲ್ಲಿ ಸುದ್ದಿಗೋಷ್ಟಿ ನಡೆಯಲಿದೆ. ಇದನ್ನೂ ಓದಿ: ರೇಣುಕಾಸ್ವಾಮಿ ಕೊಲೆ ಪ್ರಕರಣ: ಎಸ್ಪಿಪಿ ಬದಲಾವಣೆಗೆ ಸರ್ಕಾರದ ಮೇಲೆ ಒತ್ತಡ

